ಬಳ್ಳಾರಿ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಪರಮದೇವನಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯ ವೈಕಗ್ಗಲ್ ಕ್ರಾಸ್ ಬಳಿ ಜರುಗಿದೆ. ಲಿಂಗದೇವನಹಳ್ಳಿ ಗ್ರಾಮಕ್ಕೆ ಸೇರಿದ ಓಂಕಾರಪ್ಪ(40) ಹಾಗೂ ಕೆಂಚಮಲ್ಲಪ್ಪ (20) ಮೃತರು.
ಬಳ್ಳಾರಿ: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಹೂ ವ್ಯಾಪಾರಿಗಳು ಸಾವು - Flower business
ಹೂವಿನ ವ್ಯಾಪಾರ ಮುಗಿಸಿ ಸ್ವಗ್ರಾಮಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಗುರುತು ತಿಳಿಯದ ವಾಹನ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.
Accident In Bellary; Two Death
ಹೂವಿನ ವ್ಯಾಪಾರ ಮುಗಿಸಿ ಸ್ವಗ್ರಾಮಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಗುರುತು ತಿಳಿಯದ ವಾಹನ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.
ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಈ ಘಟನೆಯನ್ನು ಗಮನಿಸಿ, ಪಿಡಿ ಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪಿಎಸ್‌ಐ ಶಶಿಧರ ಮತ್ತವರ ಸಿಬ್ಬಂದಿ ರಸ್ತೆ ಸಂಚಾರವನ್ನು ಸುಗಮಗೊಳಿಸಿ, ಅಪಘಾತದಲ್ಲಿ ಮೃತಪಟ್ಟ ಇಬ್ಬರ ಶವಗಳನ್ನು ಆ್ಯಂಬುಲೆನ್ಸ್‌ನಲ್ಲಿ ವಿಮ್ಸ್ ಆಸ್ಪತ್ರೆಗೆ ಸಾಗಿಸಿದ್ದಾರೆ.