ಬಳ್ಳಾರಿ: ಯೂ ಟರ್ನ್ ತೆಗೆದುಕೊಳ್ಳುವ ವೇಳೆ ಎದುರಿಗೆ ಬಂದ ಬುಲೆಟ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ನಗರದ ಹೊಸಪೇಟೆ ರಸ್ತೆಯಲ್ಲಿ ನಡೆದಿದೆ.
ಯೂ-ಟರ್ನ್ ವೇಳೆ ಅಪಘಾತ: ಬಳ್ಳಾರಿಯಲ್ಲಿ ವ್ಯಕ್ತಿ ಸಾವು - ಬಳ್ಳಾರಿ ಅಪಘಾತ ಸುದ್ದಿ
ಯೂ ಟರ್ನ್ ತೆಗೆದುಕೊಳ್ಳುವ ವೇಳೆ ಅಪಘಾತ ಸಂಭವಿಸಿದ್ದರಿಂದ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಅಪಘಾತ
ಇಲ್ಲಿನ ಜಾಗೃತಿ ನಗರದ ಶಬ್ಬೀರ್(56) ಮೃತ ವ್ಯಕ್ತಿ. ಸ್ಕೂಟಿಯಲ್ಲಿ ತೆರಳುತ್ತಿದ್ದ ಇವರು ಮಾರ್ಗ ಮಧ್ಯೆ ಯೂ ಟರ್ನ್ ತೆಗೆದುಕೊಳ್ಳುತ್ತಿದ್ದರು. ಆದರೆ ಈ ವೇಳೆ ಎದುರಿಗೆ ಬಂದ ಬುಲೆಟ್ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಗಾಯಗೊಂಡಿದ್ದ ಅವರನ್ನು ಇಲ್ಲಿನ ವಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.