ಬಳ್ಳಾರಿ:ಜಿಲ್ಲೆಯ ಹೊಸಪೇಟೆ ತಾಲೂಕಿನ ಗ್ರಾಮವೊಂದರ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ತಲೆಮರೆಸಿ ಕೊಂಡಿದ್ದನಾಗೇನಹಳ್ಳಿ ಗ್ರಾಮದ ಬಿಜೆಪಿ ಮುಖಂಡನನ್ನು ಹೊಸಪೇಟೆ ನಗರದ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಯಚೂರು ನಗರದಲ್ಲಿ ಅವಿತುಕೊಂಡಿದ್ದ ಅತ್ಯಾಚಾರದ ಆರೋಪಿ ದೇವರಗುಡಿ ಚಂದ್ರಶೇಖರಪ್ಪ ಅವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಪಿಎಸ್ಐ ಜೆ. ಪರಸಪ್ಪ ತಿಳಿಸಿದ್ದಾರೆ.
ಅತ್ಯಾಚಾರದ ಆರೋಪ ಹೊತ್ತಿರುವ ಚಂದ್ರಶೇಖರ ಅವರನ್ನು ಬಂಧಿಸಲು ಎರಡು ವಿಶೇಷ ತಂಡಗಳನ್ನು ರಚನೆ ಮಾಡಲಾಗಿತ್ತು. ಅದರೊಳಗಿನ ತಂಡವೊಂದು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿಸಿದ್ದಾರೆ.
ಏಪ್ರಿಲ್ 9ರಂದು ದೇವರಗುಡಿ ಚಂದ್ರಶೇಖರಪ್ಪ ಅವರ ವಿರುದ್ಧ ಹೊಸಪೇಟೆ ನಗರದ ಗ್ರಾಮೀಣ ಠಾಣೆಯಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಮೇಲೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಪ್ರಾಪ್ತೆ ಗರ್ಭಿಣಿಯಾದಾಗಲೇ ವಿಷಯ ಹೊರಬಂದಿತ್ತು.