ಬಳ್ಳಾರಿ: ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ವಿರೋಧಿಸಿ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದರು.
ಗಣಿನಾಡಿನಲ್ಲಿ ಮಾಜಿ ಸಚಿವ ಡಿಕೆಶಿ ಬಂಧನಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಅಕ್ರೋಶ - ಮಾಜಿ ಸಚಿವ
ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಬಂಧನ ಮಾಡಿರುವ ಕ್ರಮವನ್ನ ಖಂಡಿಸಿ ಗಣಿ ನಗರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಗಡಿಗಿ ಚನ್ನಪ್ಪ ವೃತ್ತದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ಕೆಲಕಾಲ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಟೈಯರ್ಗೆ ಬೆಂಕಿ ಹಚ್ಚುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದಿದ್ದಾರೆ. ಟ್ರಬಲ್ ಶೂಟರ್ ಎಂದೇ ಕರೆಯಿಸಿಕೊಳ್ಳುವ ಹಾಲಿ ಶಾಸಕ ಡಿಕೆಶಿ ಅವರನ್ನು ಇಡಿ ಅಧಿಕಾರಿಗಳು ಸತತ ನಾಲ್ಕು ದಿನಗಳ ಕಾಲ ವಿಚಾರಣೆಗೊಳಪಡಿಸಿ,ಇದೀಗ ಬಂಧನ ಮಾಡಿರೋದು ಸರಿಯಲ್ಲ ಎಂದರು.
ಡಿಕೆಶಿಯವರ ಬಂಧನದ ಹಿಂದೆ ಪ್ರಧಾನಿಮಂತ್ರಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕೈವಾಡವವಿದೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ. ಇದೊಂದು ರೀತಿಯ ದ್ವೇಷದ ರಾಜಕಾರಣ ಎಂದ ಪ್ರತಿಭಟನಾಕಾರರು, ಕೇಂದ್ರದ ವಿರುದ್ಧ ಹರಿಹಾಯ್ದರು.