ಬಳ್ಳಾರಿ:ಗಣಿನಗರಿ ಬಳ್ಳಾರಿಗೆ ಇಂದು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಆಗಮಿಸಿದ್ದು, ನೆಚ್ಚಿನ ನಾಯಕನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ನಿನ್ನೆ ಸಂಜೆ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲಿನ ಜಿಂದಾಲ್ ಸಮೂಹ ಸಂಸ್ಥೆಯ ಅತಿಥಿ ಗೃಹದಲ್ಲಿ ಉಳಿದುಕೊಂಡಿದ್ದ ನಟ ಪುನೀತ್ ರಾಜ್ಕುಮಾರ್ ಇಂದು ಬಳ್ಳಾರಿಗೆ ಆಗಮಿಸಿದ್ದಾರೆ.
ಬಳ್ಳಾರಿಯ ಅದಿದೇವತೆ ಕನಕದುರ್ಗಮ್ಮ ದೇಗುಲದಲ್ಲಿಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ವಿಶೇಷ ಪೂಜೆ ಸಲ್ಲಿಸಿದ ಅಪ್ಪು, ಬಳಿಕ ಯುವರತ್ನ ಟೀಸರ್ ಬಿಡುಗಡೆ ಮಾಡಿದ್ದಾರೆ.
ಪುನೀತ್ ನೋಡಲು ಅಭಿಮಾನಿಗಳ ನೂಕುನುಗ್ಗಲು: ನೆಚ್ಚಿನ ನಟನನ್ನು ನೋಡಲು ನೂರಾರು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ದೇವಸ್ಥಾನದ ಆವರಣದಲ್ಲಿ ಅಭಿಮಾನಿಗಳಿಂದ ನೂಕು ನುಗ್ಗಲು ಸಹ ಏರ್ಪಟ್ಟಿತ್ತು.