ಬಳ್ಳಾರಿ: ರಾಜ್ಯದ ಎಲ್ಲಾ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೂಡಲೇ ಉಚಿತ ಲ್ಯಾಪ್ ಟಾಪ್ ವಿತರಿಸಬೇಕೆಂದು ಆಗ್ರಹಿಸಿ ಎಐಡಿಎಸ್ಒ ಜಿಲ್ಲಾ ಸಮಿತಿಯು ರಾಜ್ಯ ಸರ್ಕಾರವನ್ನು ಆಗ್ರ ಹಿಸಿದೆ.
ಬಳ್ಳಾರಿಯ ಇಂದಿರಾ ವೃತ್ತದ (ಸಂಗಮ್ಮ) ಬಳಿ ಎಐಡಿಎಸ್ಒ ಜಿಲ್ಲಾ ಸಮಿತಿಯ ಅಧ್ಯಕ್ಷ ಜಿ.ಸುರೇಶ ಅವರ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಜಮಾಯಿಸಿ ಕೆಲಕಾಲ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಇಂದಿರಾ ವೃತ್ತದಿಂದ ಗಡಿಗಿ ಚನ್ನಪ್ಪ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಡಿಸಿಯವರಿಗೆ ಮನವಿಪತ್ರ ಸಲ್ಲಿಸಿದರು.