ಬಳ್ಳಾರಿ: AIDSO ವಿದ್ಯಾರ್ಥಿ ಸಂಘಟನೆ ವತಿಯಿಂದ ಅಖಿಲ ಕರ್ನಾಟಕ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಅದರಂತೆ ರಾಜ್ಯದ ಸಾವಿರಾರೂ ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಪೋಸ್ಟರ್ ಹಾಕುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ AIDSO ವಿದ್ಯಾರ್ಥಿ ಸಂಘಟನೆಯಿಂದ ಆನ್ಲೈನ್ ಪ್ರತಿಭಟನೆ ಬೇಡಿಕೆಗಳು: - ರಾಜ್ಯ ಸರ್ಕಾರ CET ಪರೀಕ್ಷೆ ಮುಂದೂಡಬೇಕು.
- ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಪದವಿ, ಸ್ನಾತಕೋತ್ತರ ಹಾಗೂ ಎಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದುಗೊಳಿಸಬೇಕು.
- ಪರೀಕ್ಷಾ ಶುಲ್ಕವನ್ನು ವಿದ್ಯಾರ್ಥಿಗಳಿಗೆ ಹಿಂದಿರುಗಿಸಬೇಕು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ AIDSO ವಿದ್ಯಾರ್ಥಿ ಸಂಘಟನೆಯಿಂದ ಆನ್ಲೈನ್ ಪ್ರತಿಭಟನೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ AIDSO ವಿದ್ಯಾರ್ಥಿ ಸಂಘಟನೆಯಿಂದ ಆನ್ಲೈನ್ ಪ್ರತಿಭಟನೆ
ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆನ್ಲೈನ್ ಚಳುವಳಿಯಲ್ಲಿ ಭಾಗವಹಿಸಿದ್ದಾರೆ. ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಸಚಿವರು, ವಿಶ್ವವಿದ್ಯಾಲಯಗಳ ಕುಲಪತಿಗಳು, ಕುಲಸಚಿವರಿಗೆ ಟ್ವಿಟರ್, ಇನ್‌ಸ್ಟಾಗ್ರಾಂ, ಇ-ಮೇಲ್, ಫೇಸ್ಬುಕ್ ಮೂಲಕ ಆಗ್ರಹಿಸಿದ್ದಾರೆ. ಅಲ್ಲದೆ ಬಳ್ಳಾರಿ ವಿ.ಎಸ್.ಕೆ ವಿಶ್ವವಿದ್ಯಾಲಯದ ಕುಲಪತಿಗೆ ಪ್ರಾಂಶುಪಾಲರ ಮೂಲಕ ಮನವಿ ಪತ್ರಗಳನ್ನು ಕಳಿಸಿದ್ದಾರೆ.