ಬಳ್ಳಾರಿ:ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ಎಲ್ಲಾ ಕ್ರಸ್ಟ್‌ಗೇಟ್‌ಗಳನ್ನು ತೆರೆಯಲಾಗಿದೆ. ಜಲಾಶಯದ ಒಳಹರಿವು ಹೆಚ್ಚಾಗಿರುವ ಹಿನ್ನಲೆಯಲ್ಲಿ ಬುಧವಾರವೂ ಕೂಡ ಅಂದಾಜು 1.54 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗಿದೆ.
ಮಂಗಳವಾರಷ್ಟೇ ಅಂದಾಜು 1.45 ಲಕ್ಷ ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿತ್ತು. ಜಲಾಶಯದಲ್ಲಿ ಒಳಹರಿವು ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ ತುಂಗಭದ್ರಾ ಜಲಾಶಯದ ನಾಲೆಗಳಿಗೆ ಸರಿ ಸುಮಾರು 9726 ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ. ಹೊರ ಹರಿವು ಹೆಚ್ಚಿಸುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ನದಿಗೆ ಇಳಿಯದಂತೆ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಸೂಚನೆ ನೀಡಿದ್ದಾರೆ.
ತುಂಗಭದ್ರಾ ಜಲಾಶಯದಲ್ಲಿ ತೆರೆಯಲಾದ ಕ್ರಸ್ಟ್ಗೇಟ್ಗಳು ಹೊಸಪೇಟೆ, ಸಿರುಗುಪ್ಪ ಹಾಗೂ ಕಂಪ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಯಾವುದೇ ಕಾರಣಕ್ಕೂ ರಜೆ ಪಡೆಯದೇ ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಕಾರ್ಯನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿರುವುದಾಗಿಯೂ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ಎಲ್ಲಾ ಕ್ರಸ್ಟ್ ಗೇಟ್ ಗಳನ್ನು ಓಪನ್ ಮಾಡಲಾಗಿದೆ. ಜಲಾಶಯದ ಒಳಹರಿವು ಹೆಚ್ಚಾಗಿರುವ ಹಿನ್ನಲೆಯಲ್ಲಿ ಬುಧವಾರವೂ ಕೂಡ ಅಂದಾಜು 1.54 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗಿದೆ.
ಮಂಗಳವಾರಷ್ಟೇ ಅಂದಾಜು 1.45 ಲಕ್ಷ ಕ್ಯೂಸೆಕ್ ನೀರನ್ನು ಬಿಡಲಾಗಿತ್ತು. ಜಲಾಶಯದಲ್ಲಿ ಒಳಹರಿವು ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದಲ್ಲದೆ ತುಂಗಭದ್ರಾ ಜಲಾಶಯದ ನಾಲೆಗಳಿಗೆ ಸರಿ ಸುಮಾರು 9,726 ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ. ಹೊರಹರಿವು ಹೆಚ್ಚಿಸುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ನದಿಗೆ ಇಳಿಯದಂತೆ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಸೂಚನೆ ನೀಡಿದ್ದಾರೆ.
ಹೊಸಪೇಟೆ, ಸಿರುಗುಪ್ಪ ಹಾಗೂ ಕಂಪ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಯಾವುದೇ ಕಾರಣಕ್ಕೂ ರಜೆ ಪಡೆಯದೇ ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಕಾರ್ಯನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿರುವುದಾಗಿಯೂ ಜಿಲ್ಲಾಧಿಕಾರಿ ತಿಳಿಸಿದ್ದಾರೆ.