ಬಳ್ಳಾರಿ: ರೈತರ ಸಾಲಮನ್ನಾ, ಡಾ.ಸ್ವಾಮಿನಾಥನ್ ವರದಿ, ಉದ್ಯೋಗ ಖಾತ್ರಿ, ಋಣ ಮುಕ್ತ ಕಾಯ್ದೆ ವಿಚಾರವಾಗಿ ಬಳ್ಳಾರಿ ಜಿಲ್ಲಾ ಅಖಿಲ ಭಾರತ ಸಂಘರ್ಷ ಸಮನ್ವಯ ಸಮಿತಿಯಿಂದ ಜನವರಿ 8 ರಂದು ಗ್ರಾಮೀಣ ಕರ್ನಾಟಕ ಬಂದ್ಗೆ ಕರೆ ನೀಡಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಶಿವಶಂಕರ್ ತಿಳಿಸಿದರು.
ಈ ಸಮಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಐದು ರೈತ ಸಂಘಟನೆಗಳು ಸೇರಿ ಜನವರಿ 8 ರಂದು ಗ್ರಾಮೀಣ ಭಾರತ್ ಬಂದ್ ಮತ್ತು ಕರ್ನಾಟಕ ಗ್ರಾಮೀಣ ಬಂದ್ಗೆ ಕರೆ ನೀಡಿದೆ.
ಬಂದ್ಗೆ ಕರೆ ನೀಡಿದ ಅಖಿಲ ಭಾರತ ಸಂಘರ್ಷ ಸಮನ್ವಯ ಸಮಿತಿ ಲೋಕಸಭಾ ಚುನಾವಣೆಗೂ ಮುಂಚೆ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾಯ್ದೆ ಹಾಗೂ ಋಣ ಮುಕ್ತ ಕಾಯ್ದೆಗಳನ್ನು ಪಾರ್ಲಿಮೆಂಟ್ನಲ್ಲಿ ಚರ್ಚಿಸಿ ಜಾರಿ ಮಾಡಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಮತ್ತು ಈ ಸಂಬಂಧ ರಾಷ್ಟ್ರಪತಿಗಳು ನೀಡಿದ್ದ ಭರವಸೆಯನ್ನು ನೆನಪಿಸುವ ಮತ್ತು ಉಳಿದ ಬೇಡಿಕೆಗಳ ಈಡೇರಿಕೆಗೆ ಮನವಿ ಸಲ್ಲಿಸುವುದಾಗಿ ಸಂಘದ ಸಮನ್ವಯ ಸಮಿತಿ ಸದಸ್ಯರು ತಿಳಿಸಿದ್ದಾರೆ.
21 ಬೇಡಿಕೆಗಳನ್ನು ಒತ್ತಾಯಿಸಿ ಅಂದು ಬೆಳಗ್ಗೆ ಬಳ್ಳಾರಿಯ ಮೋತಿ ಸರ್ಕಲ್ನಲ್ಲಿ ಸೇರಿ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸುತ್ತೇವೆ ಎಂದು ತಿಳಿಸಿದರು.