ಬಳ್ಳಾರಿ: ಜಿಲ್ಲೆಯ ಹೊಸಪೇಟೆ ನಗರದ ತಹಶೀಲ್ದಾರ್ ಕಚೇರಿಯಲ್ಲಿಂದು ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ್ದು, ಯಾವುದೇ ಪ್ರಾಣಹಾನಿ ಆಗಿಲ್ಲ.
ಹೊಸಪೇಟೆ ತಹಶೀಲ್ದಾರ್ ಕಚೇರಿಯಲ್ಲಿ ಅಗ್ನಿ ಅವಘಡ: ಕಡತಗಳು ಬೆಂಕಿಗಾಹುತಿ - accidental fire in Tahsildar's office
ಹೊಸಪೇಟೆ ತಹಶೀಲ್ದಾರ್ ಕಚೇರಿಯ ವಿದ್ಯುತ್ ವಾಹಕ ತಂತಿಗಳಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಕಚೇರಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ತಹಶೀಲ್ದಾರ್ ಕಚೇರಿಯಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ: ತಪ್ಪಿದ ಪ್ರಾಣಾಪಾಯ
ಹೊಸಪೇಟೆ ತಹಶೀಲ್ದಾರ್ ಕಚೇರಿಯ ವಿದ್ಯುತ್ ವಾಹಕ ತಂತಿಗಳಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಈ ಅವಘಡ ನಡೆದಿದ್ದು, ಕಚೇರಿಯೊಳಗಿದ್ದ ಕಂಪ್ಯೂಟರ್ ಹಾಗೂ ಕಡತಗಳು ಸುಟ್ಟು ಕರಕಲಾಗಿವೆ. ವಿಷಯ ತಿಳಿದ ಕ್ಷಣಾರ್ಧದಲ್ಲಿಯೇ ಅಗ್ನಿಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹತ್ತಿರಬಹುದು ಎಂದು ಶಂಕಿಸಿ, ಸ್ಥಳಕ್ಕೆ ಎಸಿ ಶೇಖ್ ತನ್ವೀರ್ ಆಸೀಫ್ ಹಾಗೂ ತಹಶೀಲ್ದಾರ್ ಹೆಚ್.ವಿಶ್ವನಾಥ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.