ಬಳ್ಳಾರಿ:ಗಣಿನಾಡು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಕಡಿವಾಣ ಬೀಳದೆ ಇರೋದರಿಂದ ಮೇ. 19 (ಬುಧವಾರ) ಬೆಳಗ್ಗೆ 10 ಗಂಟೆಯಿಂದ ಮುಂದಿನ ಐದು ದಿನಗಳ ಕಾಲ ಕಂಪ್ಲೀಟ್ ಲಾಕ್ಡೌನ್ಗೆ ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಇಂದು (ಮೇ. 18) ಜಿಲ್ಲಾಧಿಕಾರಿಗಳು ಈ ಕುರಿತು ಆದೇಶ ಹೊರಡಿಸಲಿದ್ದಾರೆ. ಕೊರೊನಾ ಸೋಂಕು ಮಿತಿ ಮೀರುತ್ತಿದೆ. ನಿಮ್ಮನ್ನು ರಕ್ಷಣೆ ಮಾಡೋಕೆ ನಾಳೆ ನಾವೇ ಉಳಿಯುತ್ತೇವೆ ಎನ್ನುವ ಗ್ಯಾರೆಂಟಿ ಇಲ್ಲ ಎಂದ್ರು.
ಹೀಗಾಗಿ, ಉಭಯ ಜಿಲ್ಲೆಗಳ ಜನತೆ ಲಾಕ್ಡೌನ್ಗೆ ಸಹಕಾರ ನೀಡಬೇಕು. ರೈತರಿಗೆ ಯಾವ ರೀತಿ ರಿಯಾಯಿತಿ ಕೊಡಬೇಕು ಎಂಬುದರ ಕುರಿತು ಆದೇಶ ಹೊರಡಿಸಲಾಗುವುದು ಎಂದರು.
ಇದನ್ನೂ ಓದಿ:3ನೇ ಅಲೆ ಎದುರಿಸಲು ಜಿಲ್ಲಾಡಳಿತ ಸಂಪೂರ್ಣ ಸಿದ್ಧವಾಗಬೇಕು: ಸಚಿವ ಈಶ್ವರಪ್ಪ
ಸಿಎಂ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದು, ಕೊರೊನಾ ಕಂಟ್ರೋಲ್ಗೆ ಸ್ವಯಂ ನಿರ್ಧಾರ ತೆಗೆದುಕೊಳ್ಳಿ ಎಂದಿದ್ದಾರೆ. ಹೀಗಾಗಿ ಈ ನಿರ್ಧಾರಕ್ಕೆ ಬರಲಾಗಿದೆ. ಐದು ದಿನದೊಳಗೆ ಸೋಂಕಿಗೆ ಕಡಿವಾಣ ಬೀಳದಿದ್ದರೆ ಮತ್ತೆ ಲಾಕ್ಡೌನ್ ವಿಸ್ತರಿಸಲು ಚಿಂತನೆ ಮಾಡಲಾಗುವುದು ಎಂದು ತಿಳಿಸಿದರು.