ಬಳ್ಳಾರಿ: ಕರ್ನಾಟಕ ಬಿಜೆಪಿ ಸರ್ಕಾರ ಸಂಸದ ಅನಂತ್ ಕುಮಾರ್ ಹೆಗಡೆಯನ್ನು ನಾಯಿ ತರ ಬೊಗಳೋಕೆ ಬಿಟ್ಟಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ ಎಸ್ ಮಹ್ಮದ್ ರಫೀಕ್ ವಾಗ್ದಾಳಿ ನಡೆಸಿದ್ದಾರೆ.
ಸಂಸದ ಅನಂತ ಕುಮಾರ್ ಹೆಗಡೆ_ ತರ ಬೊಗಳುತ್ತಿದ್ದಾರೆ.. ಬಳ್ಳಾರಿ ಕೈ ಅಧ್ಯಕ್ಷರ ವಾಗ್ದಾಳಿ - ಗಾಂಧೀಜಿ ವಿರುದ್ಧ ಸಂಸದ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ
ಗಾಂಧೀಜಿ ವಿರುದ್ಧ ಅವಹೇಳಕಾರಿಯಾಗಿ ಮಾತನಾಡಿರುವ ಸಂಸದ ಅನಂತ ಕುಮಾರ್ ಹೆಗಡೆ ಲೋಕಸಭಾ ಸದಸ್ಯತ್ವ ರದ್ದು ಮಾಡಿ ಬಂಧಿಸಬೇಕೆಂದು ಒತ್ತಾಯಿಸಿ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ರಾಯಲ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅನಂತಕುಮಾರ್ ಹೆಗಡೆ ಸಂವಿಧಾನ ವಿರೋಧಿ ಅಂತಾ ಪ್ರತಿಭಟನಾಕಾರರು ಘೋಷಣೆಗಳನ್ನ ಕೂಗಿದರು. ಅನಂತಕುಮಾರ್ ಹೆಗಡೆ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಈ ವೇಳೆ ಮಾತನಾಡಿದ ಜಿ ಎಸ್ ಮಹ್ಮದ್ ರಫೀಕ್, ಬಿಜೆಪಿಯವರಿಗೆ ಸಂವಿಧಾನದ ಬಗ್ಗೆ ಗೌರವವಿಲ್ಲ. ಭಾರತ ಸ್ವಾತಂತ್ರ್ಯಕ್ಕಾಗಿ ಒಬ್ಬನೇ ಒಬ್ಬ ಬಿಜೆಪಿ ನಾಯಕ ಹೋರಾಟ ನಡೆಸಿಲ್ಲ. ದೇಶದ ಸ್ವಾತಂತ್ರ್ಯ ಹೋರಾಟ ನಡೆಸಿದ ಗಾಂಧೀತಿ ಬಗ್ಗೆ ಅವಹೇಳನಕಾರಿ ಮಾತನಾಡಿ ಹೀಯಾಳಿಸಿದ ಸಂಸದ ಹೆಗಡೆ ವಿರುದ್ಧ ಪ್ರತಿಭಟನಾಕಾರರು ಕಿಡಿಕಾರಿದರು.
ಬಿಜೆಪಿಯಲ್ಲಿ ಒಬ್ಬರಾದರೂ ಸ್ವಾತಂತ್ರ್ಯ ಹೋರಾಟಗಾರಾರು ಇದ್ದಾರೆ ಎಂದು ಸಾಬೀತು ಮಾಡಿ ಮಾಧ್ಯಮದ ಮುಂದೆ ತೋರಿಸಲಿ. ದೇಶದ ಆರ್ಥಿಕತೆ ನೆಲಕಚ್ಚಿದೆ. ಅದರ ಬಗ್ಗೆ ಆಲೋಚನೆ ಮಾಡುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಮಾಡಿದನ್ನು ಎಲ್ಲ ಬಿಜೆಪಿ ಸರ್ಕಾರ ಮಾರಾಟ ಮಾಡಿ ಜೀವನ ಮಾಡುತ್ತಿದೆ ಎಂದು ರಫೀಕ್ ದೂರಿದರು. ಕೇಂದ್ರ ಸರ್ಕಾರ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ಎಂದು ಘೋಷಣೆ ಮಾಡಿ ಜನರನ್ನು ಮೂರ್ಖರನ್ನಾಗಿ ಮಾಡುತ್ತಿದೆ ಎಂದು ಮಹಮ್ಮದ್ ರಫೀಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.