ಬಳ್ಳಾರಿ:ಅಂಗನವಾಡಿಯಲ್ಲೇ ಎಲ್ಕೆಜಿ, ಯುಕೆಜಿ ಆರಂಭ ಮಾಡಿ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕಕರ ಸಂಘದ ರಾಜ್ಯ ಉಪಾಧ್ಯಕ್ಷೆ ನಾಗರತ್ನಮ್ಮ ತಮ್ಮ ಅಭಿಪ್ರಾಯ ತಿಳಿಸಿದರು.
ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, 2019ರಲ್ಲಿ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳನ್ನು ತೆರೆದು ಮೂರುವರೆ ವರ್ಷ ಮೇಲ್ಪಟ್ಟ ಮಕ್ಕಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆ 30 ನಿಮಿಷದವರೆಗೆ ಶಾಲೆ ನಡೆಸಬೇಕು. ಇದಕ್ಕೆ ಅತಿಥಿ ಶಿಕ್ಷಕರನ್ನು ನೇಮಿಸಿ ಅವರಿಗೆ ಗೌರವಧನವನ್ನು ಎಸ್.ಡಿ.ಎಂ.ಸಿ ಸಮಿತಿಯ ಮೂಲಕ ನೀಡಬೇಕಾಗಿದೆ. ಈ ಮೂಲಕ ಶಾಲೆಯ ದಾಖಲಾತಿ ಹೆಚ್ಚಾಗುವುದು ಎಂದರು.
ಈ ಮೇಲಿನ ಆದೇಶದಂತೆ 1975 ರಲ್ಲಿ ಬಂದ ಐ.ಸಿ.ಡಿ.ಎಸ್ ಯೋಜನೆ ಅಡಿಯಲ್ಲಿ ಅಂಗನವಾಡಿ ಕೇಂದ್ರಗಳು ಸ್ಥಾಪನೆ ಆಗಿದೆ. ಅದರಲ್ಲಿ 3 ರಿಂದ 6 ವರ್ಷದ ಮಕ್ಕಳಿಗಾಗಿ 16,40,170 ಮಕ್ಕಳ ಅಂಗನವಾಡಿಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದರು.
ಬೇಡಿಕೆಗಳು :