ಕರ್ನಾಟಕ

karnataka

ETV Bharat / state

ಬಳ್ಳಾರಿಯಲ್ಲಿ ಮತ್ತೊಬ್ಬ ಕೊರೊನಾ ಸೋಂಕಿತ ಗುಣಮುಖ - ಬಳ್ಳಾರಿ ಸೋಂಕಿತ ವ್ಯಕ್ತಿ ಗುಣಮುಖ ಸುದ್ದಿ

ಜಿಲ್ಲೆಯಲ್ಲಿ ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ 16ಕ್ಕೆ ಏರಿಕೆಯಾಗಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆಯ ಐಸೋಲೇಷನ್​ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 20ಕ್ಕಿಳಿದಿದೆ.

Another Corona infected person released in Bellary
ಬಳ್ಳಾರಿಯಲ್ಲಿ ಮತ್ತೊಬ್ಬ ಕೊರೊನಾ ಸೋಂಕಿತ ವ್ಯಕ್ತಿ ಗುಣಮುಖ

By

Published : May 27, 2020, 3:03 PM IST

ಬಳ್ಳಾರಿ: ಕೊರೊನಾ ಸೋಂಕಿನಿಂದ ಮತ್ತೋರ್ವ ಗುಣಮುಖನಾದ ಹಿನ್ನೆಲೆ ಜಿಲ್ಲಾ ಕೋವಿಡ್-19 ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.

ಇದರಿಂದ ಜಿಲ್ಲೆಯಲ್ಲಿ ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ 16ಕ್ಕೆ ಏರಿಕೆಯಾಗಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆಯ ಐಶೋಲೇಷನ್​ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 20ಕ್ಕಿಳಿದಿದೆ. 34 ವರ್ಷದ ಪಿ-863 ವ್ಯಕ್ತಿ ಕಂಪ್ಲಿಯ ಮಾರುತಿ ನಗರ ಪ್ರದೇಶದ ನಿವಾಸಿಯಾಗಿದ್ದು, ಬೆಂಗಳೂರಿಂದ ಆಗಮಿಸಿದ ಟ್ರಾವೆಲ್ ಹಿಸ್ಟರಿ ಇದೆ.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎನ್.ಬಸರೆಡ್ಡಿ, ಗುಣಮುಖರಾಗಿ ಮನೆಯತ್ತ ತೆರಳಲು ಸಿದ್ಧರಾಗಿ ನಿಂತಿದ್ದ ಪಿ-863ಗೆ ಹೂಗುಚ್ಛ, ಹಣ್ಣು-ಹಂಪಲು ನೀಡಿ ಚಪ್ಪಾಳೆ ತಟ್ಟಿ ಅಭಿನಂದಿಸಿದರು. ನಂತರ ಅವರಿಗೆ ಕಂದಾಯ ಇಲಾಖೆಯಿಂದ ನೀಡಲಾಗುವ ದಿನಸಿ ಕಿಟ್ ನೀಡಲಾಯಿತು.

ಜಿಲ್ಲಾ ಶಸ್ತ್ರಚಿಕಿತ್ಸಕ ಎನ್.ಬಸರೆಡ್ಡಿ ಮಾತನಾಡಿ, ಇವರು ಬಂದಾಗ ಸಾಕಷ್ಟು ಭಯಭೀತರಾಗಿದ್ದರು. ಇವರಿಗೆ ಆಪ್ತ ಸಮಾಲೋಚನೆ ಮಾಡಿ ಅವರಲ್ಲಿದ್ದ ಭಯ ಹೋಗಲಾಡಿಸಿದೆವು. ಆತ್ಮಸ್ಥೈರ್ಯ ತುಂಬಿ ಗುಣಮುಖರಾಗಲು ಬಹಳ ಶ್ರಮ ವಹಿಸಿದೆವು. ಇವರು 16 ದಿನಗಳಲ್ಲಿ ಗುಣಮುಖರಾಗಿ ಬಿಡುಗಡೆಯಾಗುತ್ತಿರುವುದು ಸಂತೋಷ ತಂದಿದೆ ಎಂದರು.

ಗುಣಮುಖರಾಗಿ ಹೊರ ಬಂದ ಪಿ-863 ಮಾತನಾಡಿ, ಆಸ್ಪತ್ರೆಗೆ ದಾಖಲಾಗಿ ಬಂದಾಗಿನಿಂದ ಇಲ್ಲಿಯವರೆಗೆ ಚೆನ್ನಾಗಿ ನೋಡಿಕೊಂಡರು. ಸಮರ್ಪಕ ಚಿಕಿತ್ಸೆ ಕೊಟ್ಟರು. ಧೈರ್ಯ ತುಂಬಿದರು ಎಂದು ಹೇಳಿದ ಅವರು, ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿಯ ಋಣ ನಾನೆಂದೂ ಮರೆಯುವುದಿಲ್ಲ ಎಂದರು.

ABOUT THE AUTHOR

...view details