ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಹೊಸದಾಗಿ ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಈ ಮುಖಾಂತರ ಸೋಂಕಿತರ ಸಂಖ್ಯೆ 52ಕ್ಕೆ ಏರಿಕೆಯಾಗಿದೆ.
ಗಣಿನಾಡಿನಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್ ಪತ್ತೆ - corona news
ನೆರೆಯ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಆದೋನಿ ತಾಲೂಕಿನ 40 ವರ್ಷದ ಮಹಿಳೆಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ನೆರೆಯ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಆದೋನಿ ತಾಲೂಕಿನ 40 ವರ್ಷದ ಮಹಿಳೆಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತ ಮಹಿಳೆಯನ್ನ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದ ಈ ಮಹಿಳೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.
ಇನ್ನು ವಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಈ ಮಹಿಳೆಗೆ ಪಾಸಿಟಿವ್ ಹಿನ್ನೆಲೆ ಸಿಬ್ಬಂದಿಗೂ ವೈರಸ್ ಭೀತಿ ಎದುರಾಗಿದೆ ಎನ್ನಲಾಗ್ತಿದೆ. ಜಿಲ್ಲೆಯಲ್ಲಿ ಈವರೆಗೂ 27 ಮಂದಿ ಗುಣಮುಖರಾಗಿದ್ದು, ಓರ್ವ ಮಾತ್ರ ಸಾವನ್ನಪ್ಪಿದ್ದಾನೆ. 24 ಮಂದಿಯನ್ನ ಐಸೋಲೇಷನ್ ನಲ್ಲಿಡಲಾಗಿದೆ.