ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಹೊಸದಾಗಿ ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ.
ಗಣಿನಾಡಿನಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್ ಪತ್ತೆ - Bellary
ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ 35 ವರ್ಷದ ಉದ್ಯೋಗಿ ಸೇರಿ ಆತನ ಕುಟುಂಬ ಸದಸ್ಯರನ್ನ ಕ್ವಾರಂಟೈನ್ ಮಾಡಲಾಗಿತ್ತು. ಈಗ ಈತನಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದೆ.
ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲಿನ ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ 35 ವರ್ಷದ ಉದ್ಯೋಗಿ ಸೇರಿ ಆತನ ಕುಟುಂಬ ಸದಸ್ಯರನ್ನ ಕ್ವಾರಂಟೈನ್ ಮಾಡಲಾಗಿತ್ತು. ತಮಿಳುನಾಡಿನ ಸೇಲಂಗೆ ಸೋಂಕಿತನ ತಾಯಿ ತೆರಳಿದ್ದಾಗ ಮೊದಲಿಗೆ ಈ ಮಹಾಮಾರಿ ಸೋಂಕು ಅವರಲ್ಲೂ ಕಾಣಿಸಿಕೊಂಡಿತ್ತು. ಅದರ ಬೆನ್ನಲ್ಲೇ ಕ್ವಾರಂಟೈನ್ ಮಾಡಲಾಗಿತ್ತು.
ಇದೀಗ ಮಗನಿಗೂ ಸೋಂಕು ಇರೋದು ದೃಢಪಟ್ಟಿದ್ದು, ಸೋಂಕಿತ ವ್ಯಕ್ತಿಯನ್ನ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಜಿಲ್ಲೆಯಲ್ಲಿ ಈವರೆಗೂ 32 ಮಂದಿ ಗುಣಮುಖರಾಗಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಉಳಿದ 20 ಮಂದಿಯನ್ನ ಐಸೋಲೇಷನ್ನಲ್ಲಿ ಇರಿಸಲಾಗಿದೆ.