ಬಳ್ಳಾರಿ:ವೀರಶೈವ ವಿದ್ಯಾವರ್ಧಕ ಸಂಘದ ನೂತನ ಸದಸ್ವತ್ವ ನೋಂದಣಿಗೆ ನೂತನ ಸದಸ್ಯತ್ವ ಹೋರಾಟ ಸಮಿತಿಯು ಆಗ್ರಹಿಸಿದೆ.
ವೀರಶೈವ ವಿದ್ಯಾವರ್ಧಕ ಸಂಘಕ್ಕೆ ಮನವಿ ಬಳ್ಳಾರಿಯ ಅಲ್ಲಂ ಸುಮಂಗಳಮ್ಮ ಮಹಿಳಾ ಕಾಲೇಜಿನ ಆವರಣದಲ್ಲಿನ ವೀರಶೈವ ವಿದ್ಯಾವರ್ಧಕ ಸಂಘದ ಕಚೇರಿಗೆ ವೀರಶೈವ ವಿದ್ಯಾವರ್ಧಕ ಸಂಘದ ನೂತನ ಸದಸ್ಯತ್ವ ಹೋರಾಟ ಸಮಿತಿಯ ಸಂಚಾಲಕ ಮೀನಳ್ಳಿ ಚಂದ್ರಶೇಖರಗೌಡ ನೇತೃತ್ವದಲ್ಲಿ ಸಂಘದ ಅಧ್ಯಕ್ಷ ಉಡೇದ ಬಸವರಾಜ ಹಾಗೂ ಕಾರ್ಯದರ್ಶಿ ಚೋರನೂರು ಕೊಟ್ರಪ್ಪನವರಿಗೆ ಮನವಿ ಸಲ್ಲಿಸಿದರು.
ದಶಕದಿಂದಲೂ ಸಂಘದ ನೂತನ ಸದಸ್ಯತ್ವ ನೋಂದಣಿ ಕಾರ್ಯ ನಡೆದೇ ಇಲ್ಲ. ಹೀಗಾಗಿ, ಅನೇಕರು ಸಂಘದ ಸದಸ್ಯತ್ವದಿಂದ ವಂಚಿತರಾಗಿದ್ದಾರೆ. ಕೂಡಲೇ ಸಂಘದ ನೂತನ ಸದಸ್ಯತ್ವ ನೋಂದಣಿ ಕಾರ್ಯ ನಡೆಯಬೇಕೆಂದು ಒತ್ತಾಯಿಸಿದರು.
ಸಂಘದ ಅಧ್ಯಕ್ಷ ಉಡೇದ ಬಸವರಾಜ, ಕಾರ್ಯದರ್ಶಿ ಚೋರನೂರು ಕೊಟ್ರಪ್ಪನವರು ಮನವಿ ಸ್ವೀಕರಿಸಿ, 2020ರ ಮಾರ್ಚ್ ತಿಂಗಳಲ್ಲಿ ವಿಶೇಷ ಸರ್ವ ಸದಸ್ಯರ ಸಭೆಯಲ್ಲಿ ಚರ್ಚಿಸಿ ಸಂಘದ ನೂತನ ಸದಸ್ಯರ ಸದಸ್ಯತ್ವ ನೋಂದಣಿ ಪ್ರಕ್ರಿಯೆಗೆ ಸರ್ವಾನುಮತದ ಒಪ್ಪಿಗೆ ಮೇರೆಗೆ ಚಾಲನೆ ನೀಡಲಾಗುವುದು ಎಂದು ಭರವಸೆ ನೀಡಿದರು.