ಬಳ್ಳಾರಿ: ಮಾಸಿಕ ಕನಿಷ್ಠ 12,000 ರೂ. ವೇತನ ನೀಡಿ ಅಗತ್ಯ ಸುರಕ್ಷತಾ ಸಾಮಗ್ರಿ ಒದಗಿಸುವಂತೆ ಒತ್ತಾಯಿಸಿ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟಿಸಿದರು.
ಈ ವೇಳೆ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಮಾತನಾಡಿ, ಕೊರೊನಾ ಸಮಯದಲ್ಲಿ ಆಶಾ ಕಾರ್ಯಕರ್ತೆಯರು ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ, ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಠ 12,000 ರೂ. ಗೌರವಧನ ನೀಡಬೇಕು. ಅಗತ್ಯವಿರುವಷ್ಟು ಸುರಕ್ಷತಾ ಸಾಮಗ್ರಿಗಳನ್ನು ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.