ಬಳ್ಳಾರಿ:ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಹಳ್ಳಿ ಪೊಲೀಸ್ ಠಾಣೆಯ ಎ.ಎಸ್.ಐ ಶಿವಾನಂದ (52) ರಾತ್ರಿ ಡ್ಯೂಟಿ ಮಾಡುವ ವೇಳೆಯೇ ಅಸುನೀಗಿದ್ದಾರೆ.
ಕರ್ತವ್ಯನಿರತ ಎಎಸ್ಐ ಹೃದಯಾಘಾತದಿಂದ ಸಾವು - ಕಾನಾಹೊಸಹಳ್ಳಿ ಪೊಲೀಸ್ ಠಾಣೆಯ ಎ.ಎಸ್.ಐ
ಕಾನಾಹೊಸಹಳ್ಳಿ ಪೊಲೀಸ್ ಠಾಣೆಯ ಎ.ಎಸ್.ಐ ಶಿವಾನಂದ ಅವರು ರಾತ್ರಿ ಕರ್ತವ್ಯನಿರತರಾಗಿದ್ದ ವೇಳೆ ಹೃದಯಘಾತ ಸಂಭವಿಸಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಅಸುನೀಗಿದ ಎಎಸ್ಐ
ಶಿವಾನಂದ, ಡ್ಯೂಟಿ ವೇಳೆ ಬೆಳಗಿನ ಜಾವ 3 ಗಂಟೆಯ ಸಮಯದಲ್ಲಿ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಜಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೂಲತಃ ಹರಪನಹಳ್ಳಿ ತಾಲೂಕಿನ ಬಾಗಳಿ ಗ್ರಾಮದವರಾದ ಶಿವಾನಂದ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇಂದು ಸಂಜೆ ಬಾಗಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕೂಡ್ಲಿಗಿ ಡಿವೈಎಸ್ಪಿ ಶಿವಕುಮಾರ್ ಮಾಹಿತಿ ನೀಡಿದ್ದಾರೆ.