ಬಳ್ಳಾರಿ: ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಗೆ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಆಲೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಕೂಡ್ಲಿಗಿ ತಾಲೂಕಿನ ಹನಸಿ ಗ್ರಾಮದ ಗುರುಬಸವರಾಜ (35) ಎಂದು ಗುರುತಿಸಲಾಗಿದ್ದು, ಇವರು ಬೆಂಗಳೂರಿನ ವಿಕಾಸಸೌಧದ ಸಹಾಯಕ ಇಂಜಿನಿಯರ್ ಗುತ್ತಿಗೆದಾರ ನೌಕರರಾಗಿ ಸೇವೆಸಲ್ಲಿಸುತ್ತಿದ್ದರು.