ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೊಸಳ್ಳಿ ಹೋಬಳಿಯ ಹರಳಿಯಾಳ ಗ್ರಾಮದಲ್ಲಿ ಅಕ್ರಮ ಮರಳು ದಂಧೆ ನಡೆಸುವವರ ಮೇಲೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಲಾಗಿದೆ.
ಮರಳು ದಂಧೆಕೋರರಿಗೆ ನಡುಕ ಹುಟ್ಟಿಸಿದ ಡಿವೈಎಸ್ಪಿ: ಮೂವರ ಬಂಧನ - illegal sand mining
ಅಕ್ರಮ ಮರಳು ದಂಧೆ ನಡೆಸುವವರ ಮೇಲೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಮೂವರನ್ನು ಬಂಧಿಸಲಾಗಿದೆ. ಈ ಘಟನೆ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೊಸಳ್ಳಿ ಹೋಬಳಿಯ ಹರಳಿಯಾಳ ಗ್ರಾಮದಲ್ಲಿ ನಡೆದಿದೆ.
ಚಾಲಕ ಗುರುಸ್ವಾಮಿ, ಸಣ್ಣಪ್ಪ ಹಾಗೂ ಟ್ರ್ಯಾಕ್ಟರ್ ಮಾಲೀಕರಾದ ಹನುಮಂತಪ್ಪ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರು ನಿರಂತರವಾಗಿ ಅಕ್ರಮ ಮರಳು ಕಳ್ಳ ಸಾಗಾಣಿಕೆಯಲ್ಲಿ ತೊಡಗಿಕೊಂಡಿದ್ದರು. ಹಾಗಾಗಿ ಕೂಡ್ಲಿಗಿ ಡಿವೈಎಸ್ಪಿ ಶಿವಕುಮಾರ್ ಅವರ ಮಾರ್ಗದರ್ಶನದ ಮೇರೆಗೆ ಕಾರ್ಯಾಚರಣೆ ನಡೆಸಿ, ಅವರ ಮೇಲೆ ನಂಬರ್ 115/2019 ಮತ್ತು ಕಲಂ 379 ಐಪಿಸಿ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.
ಹೊಸಳ್ಳಿ ಠಾಣೆಯ ಸಬ್ಇನ್ಸ್ಪೆಕ್ಟರ್ ನಾಗರಾಜ್ ಮತ್ತು ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಇನ್ನಾದರೂ ಈ ತಾಲೂಕಿನಲ್ಲಿ ನಡೆಯುವ ಅಕ್ರಮಗಳನ್ನು ಅಧಿಕಾರಿಗಳು ತಡೆಯಲು ಮುಂದಾಗಿ ಸಾರ್ವಜನಿಕರಿಗೆ ಹಾಗೂ ಬಡವರಿಗೆ ನ್ಯಾಯ ಸಿಗುವಂತಾಗಲೆಂದು ತಾಲೂಕಿನ ಜನತೆ ಬಯಸುತ್ತಿದ್ದಾರೆ. ಅಲ್ಲದೆ ದಕ್ಷ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.