ಬಳ್ಳಾರಿ: ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ "ಆಯುಷ್ಮಾನ್ ಭಾರತ - ಆರೋಗ್ಯ ಕರ್ನಾಟಕ ಕಾರ್ಡ್"ಅನ್ನು ಮಾನ್ಯತೆ ಪಡೆದ ಪತ್ರಕರ್ತರಿಗೆ ವಿತರಿಸಿದರು.
ಈ ವೇಳೆ ಮಾತನಾಡಿದ ಸಚಿವರು, ಮೊದಲ ಹಂತದಲ್ಲಿ ಮಾನ್ಯತೆ ಪಡೆದ ಪತ್ರಕರ್ತರು ಹಾಗೂ ಅವರ ಅವಲಂಬಿತರಿಗೆ “ಆಯುಷ್ಮಾನ್ ಭಾರತ - ಆರೋಗ್ಯ ಕರ್ನಾಟಕ” ಕಾರ್ಡ್ಅನ್ನು ಒದಗಿಸಲಾಗುತ್ತಿದೆ. ನಂತರ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಕೆಲಸ ಮಾಡುವ ಪತ್ರಕರ್ತರು ಮತ್ತು ಅವಲಂಬಿತರಿಗೆ ಕಾರ್ಡ್ ಒದಗಿಸಲಾಗುತ್ತದೆ. ಜಿಲ್ಲೆಯಲ್ಲಿ ಸದ್ಯ 31 ಜನ ಮಾನ್ಯತೆ ಪಡೆದ ಪತ್ರಕರ್ತರು ಹಾಗೂ ಅವಲಂಬಿತರಿಗೆ ಒಟ್ಟು 124ಕ್ಕೂ ಹೆಚ್ಚು ಕಾರ್ಡ್ಗಳನ್ನು ಮುದ್ರಿಸಿ ವಿತರಿಸಲಾಗುತ್ತಿದೆ ಎಂದರು.