ಕರ್ನಾಟಕ

karnataka

ETV Bharat / state

ಭೂಮಿ ಒದಗಿಸಿದ್ರೆ ಬಾಗಲಕೋಟೆ-ಕುಡಚಿ ರೈಲು ಮಾರ್ಗ ಕಾಮಗಾರಿ ತಕ್ಷಣ ಆರಂಭ : ಸಚಿವ ಅಂಗಡಿ ಭರವಸೆ - Minister Suresh angady

ಭೂಮಿ ಗುರುತಿಸಿಕೊಡುವ ಕೆಲಸ ರೈಲ್ವೆ ಇಲಾಖೆಯ ಅಧಿಕಾರಿಗಳು ಹದಿನೈದು ದಿನದೊಳಗೆ ಪೂರ್ಣಗೊಳಿಸಬೇಕು. ಅದಾದ ಬಳಿಕ ಸ್ವಾಧೀನ ಪ್ರಕ್ರಿಯೆಯನ್ನು ಉಭಯ ಜಿಲ್ಲಾಧಿಕಾರಿಗಳು ಆರಂಭಿಸಬೇಕು. ಜೊತೆಗೆ, 114 ಎಕರೆ ಹಾಗೂ ಅರಣ್ಯ ಇಲಾಖೆಗೆ ಸಂಬಂದಿಸಿದ 41 ಎಕರೆ ಭೂಸ್ವಾಧೀನ ಪ್ರಕ್ರಿಯೆ ತಕ್ಷಣ ಆರಂಭಿಸಬೇಕು ಎಂದು ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು..

Bagalkot-Kudachi railway project to begin soon: Minister Suresh
ಭೂಮಿ ಒದಗಿಸಿದರೆ ಬಾಗಲಕೋಟೆ-ಕುಡಚಿ ರೈಲು ಮಾರ್ಗ ಕಾಮಗಾರಿ ತಕ್ಷಣ ಆರಂಭ: ಸಚಿವ ಸುರೇಶ್ ಅಂಗಡಿ ಭರವಸೆ

By

Published : Jul 11, 2020, 5:02 PM IST

ಬೆಳಗಾವಿ :ಕುಡಚಿ-ಬಾಗಲಕೋಟೆ ರೈಲು ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಗತ್ಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ರೈಲ್ವೆ ಇಲಾಖೆಗೆ ಜಮೀನು ಹಸ್ತಾಂತರಿಸಿದ್ರೆ ಶೀಘ್ರವೇ ಕಾಮಗಾರಿ ಪೂರ್ಣಗೊಳಿಸುವುದು ಪ್ರಥಮ ಆದ್ಯತೆಯಾಗಿದೆ ಎಂದು ಸಚಿವ ಸುರೇಶ್ ಅಂಗಡಿ ಹೇಳಿದರು.

ಭೂಮಿ ಒದಗಿಸಿದರೆ ಬಾಗಲಕೋಟೆ-ಕುಡಚಿ ರೈಲು ಮಾರ್ಗ ಕಾಮಗಾರಿ ತಕ್ಷಣ ಆರಂಭ: ಸಚಿವ ಸುರೇಶ್ ಅಂಗಡಿ ಭರವಸೆ

ನಗರದ ಜಿಲ್ಲಾ ಕಚೇರಿಯ ಸಭಾಂಗಣದಲ್ಲಿ ನಡೆದ ಬೆಳಗಾವಿ-ಬಾಗಲಕೋಟೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಭೂಸ್ವಾಧೀನ ಪ್ರಕ್ರಿಯೆ ಆರಂಭಗೊಂಡರೆ ಡಿಪಿಆರ್ ಮತ್ತು ಹಣ ಬಿಡುಗಡೆ ಪ್ರಕ್ರಿಯೆ ಸುಗಮವಾಗಲಿದೆ. ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆ ತಕ್ಷಣ ಆರಂಭಿಸುವಂತೆ ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಂಪೂರ್ಣ ಜಮೀನು ಒದಗಿಸುವುದು ಹಾಗೂ ಯೋಜನೆ ಕಾಮಗಾರಿಯ ಶೇ.50 ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಬೇಕಿರುವುದರಿಂದ ಸ್ಥಳೀಯ ಶಾಸಕರು ಮತ್ತು ಜಿಲ್ಲಾಧಿಕಾರಿಗಳು ಆದಷ್ಟು ಬೇಗ ಈ ಕೆಲಸ ಪೂರ್ಣಗೊಳಿಸಬೇಕು. ಭೂಮಿ ಗುರುತಿಸಿಕೊಡುವ ಕೆಲಸ ರೈಲ್ವೆ ಇಲಾಖೆಯ ಅಧಿಕಾರಿಗಳು ಹದಿನೈದು ದಿನದೊಳಗೆ ಪೂರ್ಣಗೊಳಿಸಬೇಕು. ಅದಾದ ಬಳಿಕ ಸ್ವಾಧೀನ ಪ್ರಕ್ರಿಯೆಯನ್ನು ಉಭಯ ಜಿಲ್ಲಾಧಿಕಾರಿಗಳು ಆರಂಭಿಸಬೇಕು. ಜೊತೆಗೆ, 114 ಎಕರೆ ಹಾಗೂ ಅರಣ್ಯ ಇಲಾಖೆಗೆ ಸಂಬಂದಿಸಿದ 41 ಎಕರೆ ಭೂಸ್ವಾಧೀನ ಪ್ರಕ್ರಿಯೆ ತಕ್ಷಣ ಆರಂಭಿಸಬೇಕು ಎಂದು ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಸಿಎಂ ನೇತೃತ್ವದಲ್ಲಿ ಸಭೆಗೆ ಸಲಹೆ : ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ಭೂಸ್ವಾಧೀನ ಮತ್ತು ಅನುದಾನ ಬಿಡುಗಡೆ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ಕರೆಯಬೇಕು. ಯೋಜನೆಯ ಸಂಪೂರ್ಣ ವಿವರವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದರೆ ಕಾಮಗಾರಿ ಚುರುಕುಗೊಳಿಸಲು ಅನುಕೂಲವಾಗುತ್ತದೆ. ಅಗತ್ಯ ಭೂಮಿಯ ಕುರಿತು ರೈಲ್ವೆ ಇಲಾಖೆಯ ಅಧಿಕಾರಿಗಳು ಸಮರ್ಪಕ ಮಾಹಿತಿಯನ್ನು ಒದಗಿಸಿದರೆ ಭೂಸ್ವಾಧೀನ ಕಾರ್ಯ ಸುಗಮವಾಗಲಿದೆ ಎಂದರು.

ನೈರುತ್ಯ ರೈಲ್ವೆ ವಲಯದ ಜನರಲ್ ಮ್ಯಾನೇಜರ್ ಎ. ಕೆ. ಸಿಂಗ್ ಮಾತನಾಡಿ, ಯೋಜನೆ ಈಗಾಗಲೇ ಬಹಳ ವಿಳಂಬ ಆಗಿರುವುದರಿಂದ ಲಭ್ಯವಿರುವ ಅನುದಾನ ಮತ್ತು ಭೂಮಿ ಬಳಸಿಕೊಂಡು ಭೂಸ್ವಾಧೀನ ಪ್ರಕ್ರಿಯೆ ಆರಂಭಿಸುವ ಅಗತ್ಯವಿದ್ದು, ರೈಲ್ವೆ ಇಲಾಖೆಯ ವತಿಯಿಂದ ಭೂಸ್ವಾಧೀನ ಸೇರಿದಂತೆ ಯಾವುದಾದರೂ ಹಣ ಬಿಡುಗಡೆ ಬಾಕಿ ಇದ್ರೆ ತಕ್ಷಣ ಬಿಡುಗಡೆಗೊಳಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಾಗಲಕೋಟೆ ನವನಗರಕ್ಕೆ ಗೂಡ್ಸ ಶೆಡ್ ಸ್ಥಳಾಂತರ : ನವನಗರಕ್ಕೆ ಗೂಡ್ಸ್ ಶೆಡ್ ಸ್ಥಳಾಂತರ ಹಾಗೂ ಬಾಗಲಕೋಟೆ ನೂತನ ನಿಲ್ದಾಣ ನಿರ್ಮಾಣ ಕುರಿತು ಹುಬ್ಬಳ್ಳಿ ಸಭೆಯಲ್ಲಿ ಒತ್ತಾಯಿಸಲಾಗಿತ್ತು. ಇದುವರೆಗೆ ಯಾವುದೇ ಪ್ರಗತಿಯಾಗಿಲ್ಲ ಎಂದು ಶಾಸಕ ವೀರಣ್ಣ ಚರಂತಿಮಠ ಬೇಸರ ವ್ಯಕ್ತಪಡಿಸಿದರು. ಈ ವೇಳೆ ಗೂಡ್ಸ್ ಶೆಡ್ ಸ್ಥಳಾಂತರಕ್ಕೆ ಜಾಗ ಗುರುತಿಸಲಾಗಿದೆ‌. ಆದಷ್ಟು ಬೇಗನೆ ಸ್ಥಳಾಂತರ ಮಾಡಲಾಗುವುದು ಎಂದು ಮುಖ್ಯ ಎಂಜಿನಿಯರ್ ಪ್ರೇಮನಾರಾಯಣ್ ತಿಳಿಸಿದರು.

ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ವಿ ಮಾತನಾಡಿ, ಬಾಗಲಕೋಟೆ-ಖಜ್ಜಿಡೋಣಿವರೆಗೆ 32 ಕಿ.ಮೀ. ಮಾರ್ಗ ಪೂರ್ಣಗೊಂಡಿದೆ. 16 ಎಕರೆ ಮಾತ್ರ ಭೂಸ್ವಾಧೀನ ಅಗತ್ಯವಿದೆ.ಒಟ್ಟು 454 ಎಕರೆ ಈಗಾಗಲೇ ಭೂಸ್ವಾಧೀನ ಆಗಿದೆ. ಅದೇ ರೀತಿ 894 ಭೂಸ್ವಾಧೀನ ಆಗಬೇಕಿದೆ. ಇದರಲ್ಲಿ 40 ಎಕರೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಿದೆ. 114 ಎಕರೆ ಭೂಸ್ವಾಧೀನ ಪ್ರಕ್ರಿಯೆ ಇದೀಗ ಹೊಸದಾಗಿ ಆರಂಭಿಸಲಾಗಿದ್ದು, 770 ಎಕರೆ 19(1) ಅಧಿಸೂಚನೆ ಆಗಿದ್ದು, 200 ಕೋಟಿ ಒದಗಿಸಿದ್ರೆ ತಕ್ಷಣವೇ ಭೂಸ್ವಾಧೀನ ಸಾಧ್ಯವಾಗಲಿದೆ ಎಂದರು.

ಬೆಳಗಾವಿ ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ ಮಾತನಾಡಿ, ರೈಲ್ವೆ ಯೋಜನೆಗಳ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಮುಖ್ಯ ಕಾರ್ಯದರ್ಶಿಗಳು ಸದ್ಯದಲ್ಲಿಯೇ ವಿಡಿಯೋ ಸಂವಾದ ಏರ್ಪಡಿಸಲಾಗುವುದು. ಭೂಸ್ವಾಧೀನ ಸೇರಿದಂತೆ ಬಾಕಿ ಉಳಿದಿರುವ ಕಾಮಗಾರಿಗಳ ಕುರಿತು ಅವರ ಗಮನಸೆಳೆದು ಆದಷ್ಟು ಬೇಗನೆ ಕಾಮಗಾರಿ ಚುರುಕುಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಇದರ ಜೊತೆಗೆ 213 ಎಕರೆ ಈಗಾಗಲೇ ಸ್ವಾಧೀನಪಡಿಸಿಕೊಂಡು ರೈಲ್ವೆ ಇಲಾಖೆಗೆ ನೀಡಲಾಗಿದೆ. ಉಳಿದ 236 ಎಕರೆ ಪೈಕಿ 28 ಎಕರೆಗೆ ಸಂಬಂಧಿಸಿದಂತೆ ಮಾತ್ರ ತಡೆಯಾಜ್ಞೆ ಇದೆ ಎಂದು ಸಚಿವರಿಗೆ ವಿವರಿಸಿದರು.

ABOUT THE AUTHOR

...view details