ಕರ್ನಾಟಕ

karnataka

ETV Bharat / state

ಬಳ್ಳಾರಿ: ಬಲಿಜ ಸಮಾಜವನ್ನು 2ಎಗೆ ಸೇರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ

ಬಲಿಜ ಸಮಾಜವನ್ನು ಪ್ರವರ್ಗ 2ಎಗೆ ಸೇರಿಸುವಂತೆ ಒತ್ತಾಯಿಸಿ ಬಳ್ಳಾರಿ ಜಿಲ್ಲಾ ಬಲಿಜ ಸಂಘ ಮುಖ್ಯಮಂತ್ರಿ ಯಡಿಯೂರಪ್ಪಗೆ ಮನವಿ ಮಾಡಿದೆ.

balija community plea to add them 2A category
ಬಲಿಜ ಸಮಾಜವನ್ನು 2ಎ ಗೆ ಸೇರಿಸುವಂತೆ ಮನವಿ

By

Published : Jan 4, 2021, 5:41 PM IST

ಬಳ್ಳಾರಿ:ಬಲಿಜ ಸಮಾಜವು ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಹಿಂದೆ ಉಳಿದಿದೆ. ಹಾಗಾಗಿ ನಮ್ಮನ್ನು 2ಎ ಪ್ರವರ್ಗಕ್ಕೆ ಸೇರಿಸಿ ಮೀಸಲಾತಿ ನೀಡಬೇಕು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ಬಳ್ಳಾರಿ ಜಿಲ್ಲಾ ಬಲಿಜ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ತಿಪ್ಪೇಸ್ವಾಮಿ ಮನವಿ ಮಾಡಿದರು.

ಬಲಿಜ ಸಮಾಜವನ್ನು 2ಎಗೆ ಸೇರಿಸುವಂತೆ ಮನವಿ
ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದ ಪತ್ರಿಕಾ ಭವನದಲ್ಲಿ ಸುದ್ದಿಗಾರರೊಂದಿಗೆ ಬಳ್ಳಾರಿ ಜಿಲ್ಲಾ ಬಲಿಜ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ತಿಪ್ಪೇಸ್ವಾಮಿ ಮಾತನಾಡಿದ್ರು. ಬಲಿಜ ಸಮಾಜವು ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಹಿಂದೆ ಉಳಿದಿದೆ. ಹಾಗಾಗಿ ನಮ್ಮನ್ನು ಪ್ರವರ್ಗ 2ಎ ಮೀಸಲಾತಿ ನೀಡಬೇಕು ಎಂದು ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಮಾಡಿದರು. ಈ ಹಿಂದೆ ಎರಡು ಮೂರು ಬಾರಿ ಬಿ.ಎಸ್.ಯಡಿಯೂರಪ್ಪ ಅವರು ಬಲಿಜ ಸಮಾಜವನ್ನು ಪ್ರವರ್ಗ 2ಎಗೆ ಸೇರಿಸುವ ಭರವಸೆ ನೀಡಿದ್ದರು. ಆದ್ರೆ ಇದುವರೆಗೂ ಆ ಭರವಸೆ ಈಡೇರಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ರು.

ABOUT THE AUTHOR

...view details