ಕರ್ನಾಟಕ

karnataka

ETV Bharat / state

ಜೆಎನ್​​ಯು ಅಧ್ಯಾಪಕರ ಮೇಲೆ ಹಲ್ಲೆ ಖಂಡಿಸಿ ಬಳ್ಳಾರಿಯಲ್ಲಿ ಪ್ರತಿಭಟನೆ - ಎಐಡಿಎಸ್ಒ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ

ಜೆಎನ್​ಯು ವಿವಿಯಲ್ಲಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಬಳ್ಳಾರಿಯಲ್ಲಿ ಎಐಡಿಎಸ್ಒ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

ಬಳ್ಳಾರಿಯಲ್ಲಿ ಪ್ರತಿಭಟನೆ
ಬಳ್ಳಾರಿಯಲ್ಲಿ ಪ್ರತಿಭಟನೆ

By

Published : Jan 6, 2020, 5:03 PM IST

ಬಳ್ಳಾರಿ: ಜೆಎನ್​ಯು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಹಾಗೂ ಅಧ್ಯಾಪಕರ ಮೇಲಿನ ಹಲ್ಲೆಯನ್ನು ಖಂಡಿಸಿ, ಬಳ್ಳಾರಿಯ ಗಡಿಗಿ ಚನ್ನಪ್ಪ ವೃತ್ತದಲ್ಲಿ ಎಐಡಿಎಸ್ಒ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಿನ್ನೆ ತಡರಾತ್ರಿ‌ ಜೆಎನ್​ಯು ವಿಶ್ವವಿದ್ಯಾಲಯದಲ್ಲಿ ವಿದ್ಯುತ್​​ ಸಂಪರ್ಕ ತೆಗೆದ ಕೆಲ ಗೂಂಡಾಗಳು ಮಾರಕಾಸ್ತ್ರಗಳಿಂದ ವಿದ್ಯಾರ್ಥಿನಿಯರ ಹಾಸ್ಟೆಲ್ಗೆ ನುಗ್ಗಿ ದಾಳಿ ಮಾಡಿದ್ದಾರೆ. ಅಲ್ಲದೇ ಪ್ರೊ.ಸುಚಿತ್ರ ಅವರ ತೆಲೆಹೊಡೆದಿದ್ದಾರೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಜೆಎನ್​​ಯು ಅಧ್ಯಾಪಕರ ಮೇಲೆನ ಹಲ್ಲೆಯನ್ನು ಖಂಡಿಸಿ ಎಐಡಿಎಸ್ಒ ಜಿಲ್ಲಾ ಸಮಿತಿ ಪ್ರತಿಭಟನೆ

ವಿ.ವಿ ಶುಲ್ಕ ಹೆಚ್ಚಳದ ವಿರುದ್ದ ಪ್ರತಿಭಟಿಸುತ್ತಿದ್ದ ಜೆಎನ್​ಯು ವಿದ್ಯಾರ್ಥಿ ಸಂಘದ ನಾಯಕರನ್ನು ಗುರಿಯಾಗಿಸಿಕೊಂಡು ಈ ದಾಳಿ ಮಾಡಿದ್ದಾರೆ ಎಂದು ಸಿಟ್ಟು ವ್ಯಕ್ತಪಡಿಸಿದರು.

ABOUT THE AUTHOR

...view details