ಬಳ್ಳಾರಿ:ನವೆಂಬರ್ 1ರಂದು ಗಣಿನಗರಿ ಬಳ್ಳಾರಿಯಲ್ಲಿ ನಡೆಯಲಿರುವ ರಾಜ್ಯೋತ್ಸವದ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಲಕ್ಷ್ಮಣ ಸವದಿ ಬದಲಾಗಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ನೆರವೇರಿಸಲಿದ್ದಾರೆ.
ಗಣಿನಗರಿಯಲ್ಲಿ ರಾಜ್ಯೋತ್ಸವ ವೇಳೆ ಸವದಿ ಬದಲು ಡಿಸಿಯಿಂದ ಧ್ವಜಾರೋಹಣ! - ದಿಢೀರ್ ಬೆಳವಣಿಗೆಯಿಂದ ಎಸ್.ಎಸ್.ನಕುಲ್ ಧ್ವಜಾರೋಹಣ
ನವೆಂಬರ್ 1ರಂದು ಗಣಿನಗರಿ ಬಳ್ಳಾರಿಯಲ್ಲಿ ನಡೆಯಲಿರುವ ರಾಜ್ಯೋತ್ಸವದ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಲಕ್ಷ್ಮಣ ಸವದಿ ಬದಲಾಗಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ನೆರವೇರಿಸಲಿದ್ದಾರೆ.

ಮೊದಲು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿಯವರು ಜಿಲ್ಲಾ ಕೇಂದ್ರದಲ್ಲಿ ಧ್ವಜಾರೋಹಣ ಮಾಡುವುದಾಗಿ ನಿರ್ಧರಿಸಲಾಗಿತ್ತು. ಆದರೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಯವರು ಕೊಪ್ಪಳ ಜಿಲ್ಲೆಯಲ್ಲಿ ಪೂರ್ವನಿಯೋಜಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅನುವಾಗಲು ಕೊಪ್ಪಳ ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡಲು ನೇಮಿಸಲಾಗಿದೆ.
ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡುವಂತೆ ಕೋರಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ರಾಜ್ಯ ಶಿಷ್ಟಾಚಾರ) ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎನ್.ಪ್ರವೀಣ ಅವರು ಅ.28ರಂದು ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.