ಬಳ್ಳಾರಿ:ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಫೆಬ್ರವರಿ 1 ಮತ್ತು 2 ರಂದು 71ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ.
ಫೆ.1ರಿಂದ ಗಣಿನಾಡಿನಲ್ಲಿ 71 ನೇ ಕನ್ನಡ ಸಾಹಿತ್ಯ ಸಮ್ಮೇಳನ - 71 ನೇ ಕನ್ನಡ ಸಾಹಿತ್ಯ ಸಮ್ಮೇಳನ ಲೇಟೆಸ್ಟ್ ಸುದ್ದಿ
ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 71ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ.
![ಫೆ.1ರಿಂದ ಗಣಿನಾಡಿನಲ್ಲಿ 71 ನೇ ಕನ್ನಡ ಸಾಹಿತ್ಯ ಸಮ್ಮೇಳನ BALLARI DIST KASAPA PRESS MEET NEWS](https://etvbharatimages.akamaized.net/etvbharat/prod-images/768-512-5884999-thumbnail-3x2-surya.jpg)
ಸಾಹಿತಿ ಪ್ರೊ.ಜೆ.ಎಂ.ನಾಗಯ್ಯ ಅವರನ್ನ ಸಮ್ಮೇಳನಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಬಳ್ಳಾರಿಯ ಸಾಂಸ್ಕೃತಿಕ ಸಮುಚ್ಚಯ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಮ ಕಲ್ಮಠ ಅವರು ಮಾತನಾಡಿ, ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದರು.
ಎರಡು ದಿನಗಳ ಕಾಲ ನಡೆಯಲಿರುವ ಈ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಸಮಕಾಲೀನ ಸಾಹಿತ್ಯ ನಿಲುವುಗಳು ಹಾಗೂ ಬಳ್ಳಾರಿ ಜಿಲ್ಲೆಯ ಸಾಂಸ್ಕೃತಿಕ ಅಸ್ಮಿತೆ, ಕೃಷಿ ಮತ್ತು ಕೈಗಾರಿಕೆ, ವಿದ್ಯಾರ್ಥಿ ಕವಿಗೋಷ್ಠಿ, ಬಹಿರಂಗ ಅಧಿವೇಶನ ಸೇರಿದಂತೆ ಇನ್ನಿತರೆ ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾಹಿತಿ ನೀಡಿದ್ರು.