ಬಳ್ಳಾರಿ: ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆಯೇ ಗಣಿ ಜಿಲ್ಲೆಯಲ್ಲಿ ಆಯಾ ಗ್ರಾಮ ಪಂಚಾಯಿತಿಯ ಅಧಿಕಾರ ಹಿಡಿಯಲು ಮೂರು ರಾಜಕೀಯ ಪಕ್ಷಗಳು ಶತಾಯ ಗತಾಯ ಪ್ರಯತ್ನ ನಡೆಸಿವೆ.
ಬಿಜೆಪಿ- ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಪ್ರಮುಖ ಮುಖಂಡರು ಹಾಗೂ ಶಾಸಕರು, ಸಚಿವರು ಗ್ರಾಮ ಪಂಚಾಯಿತಿ ಸದಸ್ಯರಿಗೆ ಗೋವಾ ಟೂರ್ ಆಮಿಷವೊಡ್ಡಿ ತಮ್ಮತ್ತ ಸೆಳೆಯಲು ಭಾರಿ ಕಸರತ್ತು ನಡೆಸಿವೆ. ಈ ಹಿನ್ನೆಲೆ ಇಂದು ಬಳ್ಳಾರಿ ತಾಲೂಕಿನ ನಾನಾ ಗ್ರಾಮ ಪಂಚಾಯಿತಿಗಳಲ್ಲಿ ಗೆದ್ದಿರುವ ಹತ್ತಾರು ಸದಸ್ಯರನ್ನು ಗೋವಾ ರಾಜ್ಯದ ಪ್ರವಾಸ ಕೈಗೊಳ್ಳಲು ಕಾಂಗ್ರೆಸ್- ಬಿಜೆಪಿ ಪಕ್ಷಗಳು ನಿರ್ಧರಿಸಿವೆ.