ಕರ್ನಾಟಕ

karnataka

ETV Bharat / state

ಬಳ್ಳಾರಿ: ಶಾಲಾ ಪ್ರವಾಸದ ವೇಳೆ ಕಾಲು ಜಾರಿ ಬಿದ್ದು ವಿದ್ಯಾರ್ಥಿನಿ ಸಾವು - ETV Bharath Karnataka

ಶಾಲಾ ಪ್ರವಾಸದ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.

Ballari student died during a school trip
ಶಾಲಾ ಪ್ರವಾಸದ ವೇಳೆ ಕಾಲು ಜಾರಿ ಬಿದ್ದು ವಿದ್ಯಾರ್ಥಿನಿ ಸಾವು

By

Published : Dec 11, 2022, 11:27 AM IST

ಬಳ್ಳಾರಿ:ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಕೆ ಬೆಳಗಲ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವತಿಯಿಂದ ಕೈಗೊಳ್ಳಲಾಗಿದ್ದ ಪ್ರವಾಸ ಸಮಯದಲ್ಲಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಾಳೆ. 10ನೇ ತರಗತಿಯಲ್ಲಿ ಓದುತ್ತಿದ್ದ ನಾಗಲಕ್ಷ್ಮಿ(16) ಮೃತ ವಿದ್ಯಾರ್ಥಿನಿ. ಶ್ರವಣಬೆಳಗೊಳದಲ್ಲಿ ಮೆಟ್ಟಿಲು ಹತ್ತುವಾಗ ಕಾಲು ಜಾರಿ ಬಿದ್ದು ತಲೆಗೆ ಪೆಟ್ಟಾಗಿದ್ದರಿಂದ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ಬಿ.ಇ.ಒ ಗುರಪ್ಪ ತಿಳಿಸಿದ್ದಾರೆ.

ಶಿಕ್ಷಣ ಇಲಾಖೆಯ ಅಧಿಕಾರಿಗಳು ಕೆ.ಬೆಳಗಲ್ ಗ್ರಾಮಕ್ಕೆ ತೆರಳಿ ಘಟನೆ ಕುರಿತು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದಿದ್ದಾರೆ. ವಿದ್ಯಾರ್ಥಿನಿಯ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ.

ಇದನ್ನೂ ಓದಿ:ಕಲಘಟಗಿ ಶಾಲೆಯಲ್ಲಿ ಹೃದಯಾಘಾತದಿಂದ 4ನೇ ತರಗತಿ ಬಾಲಕ ಸಾವು..

ABOUT THE AUTHOR

...view details