ಬಳ್ಳಾರಿ: ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಶಿವಾನಂದ ನಗರದಲ್ಲಿಂದು ಬೆಳ್ಳಂಬೆಳಗ್ಗೆ ಕರಡಿ ದಾಳಿ ನಡೆದಿದೆ.
ಕರಡಿ ದಾಳಿ: ರೈತ ಹಾಗೂ ಮಹಿಳೆಗೆ ಗಾಯ - Bear attack
ಹಗರಿಬೊಮ್ಮನಹಳ್ಳಿ ತಾಲೂಕಿನ ಶಿವಾನಂದ ನಗರದಲ್ಲಿಂದು ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತ ಹಾಗೂ ಮಹಿಳೆ ಮೇಲೆ ಕರಡಿಯೊಂದು ದಾಳಿ ನಡೆಸಿ ಗಾಯಗೊಳಿಸಿದೆ.
ಗಾಯಗೊಂಡ ಕೃಷಿ ಕೂಲಿ ಕಾರ್ಮಿಕ ಮಹಿಳೆ
ಶಿವಾನಂದ ನಗರ ಹೊರವಲಯದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತ ಹಾಗೂ ಮಹಿಳೆ ಮೇಲೆ ಕರಡಿಯೊಂದು ದಾಳಿ ನಡೆಸಿ ಗಾಯಗೊಳಿಸಿದೆ. ಕರಡಿ ದಾಳಿಯಲ್ಲಿ ಗಾಯಗೊಂಡಿದ್ದ ರೈತ ಫಕೀರಪ್ಪ ಹಾಗೂ ಕೂಲಿ ಕಾರ್ಮಿಕ ಮಹಿಳೆ ರತ್ನಮ್ಮ ಅವರನ್ನು ಹಗರಿಬೊಮ್ಮನಹಳ್ಳಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ.