ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ದರೋಜಿ ಹತ್ತಿರದ ಕಣಿಮೆ ಮಾರಮ್ಮ ದೇವಸ್ಥಾನ ಆವರಣದಲ್ಲಿ ರಾತ್ರಿ ಕರಡಿ ಪ್ರತ್ಯಕ್ಷವಾಗಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ದೇವಸ್ಥಾನದ ಆವರಣದಲ್ಲಿ ಕರಡಿ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ - Daroji of Sandoor taluk of Bellary district
ಬಳ್ಳಾರಿ ಜಿಲ್ಲೆಯಲ್ಲಿ ಇತ್ತೀಚಿಗೆ ಕರಡಿಗಳ ಹಾವಳಿ ಹೆಚ್ಚಾಗುತ್ತಿದ್ದು, ಆಹಾರ ಅರಸಿ ನಾಡಿಗೆ ಬಂದು ಜನರನ್ನು ಬೆಚ್ಚಿ ಬೀಳಿಸುತ್ತಿವೆ.
ದೇವಸ್ಥಾನದ ಆವರಣದಲ್ಲಿ ಕರಡಿ ಪ್ರತ್ಯಕ್ಷ
ಆಹಾರ ಅರಸಿ ಕರಡಿ ನಾಡಿಗೆ ಬಂದಿದೆ ಎನ್ನಲಾಗಿದೆ. ದೇವಸ್ಥಾನದಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ.
ಕರಡಿ ಒಡಾಡಿರುವ ದೃಶ್ಯವನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.