ಬಳ್ಳಾರಿ :ಟೋಕಿಯೊ ಒಲಿಂಪಿಕ್ಸ್ನ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾಗೆ ಗಣಿನಾಡು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲಿನ ಜಿಂದಾಲ್ ಸಮೂಹ ಸಂಸ್ಥೆಯೇ ಅಖಾಡ ಆಗಿತ್ತಂತೆ.
ಹರಿಯಾಣ ಮೂಲದ ನೀರಜ್ ಚೋಪ್ರಾ, ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ತೋರಣಗಲ್ಲಿನ ಜಿಂದಾಲ್ ಸಮೂಹ ಸಂಸ್ಥೆಯಲ್ಲಿರುವ ಇನ್ಸ್‌ಪೈಯರ್ ಇನ್ಸ್‌ಟಿಟ್ಯೂಟ್ ಆಫ್ ಸ್ಪೋರ್ಟ್ಸ್‌ನಲ್ಲಿ ತರಬೇತಿ ಪಡೆದಿದ್ದಾರೆ. ಜಿಂದಾಲ್ ಸಮೂಹ ಸಂಸ್ಥೆಯಲ್ಲಿ ತರಬೇತಿ ಪಡೆಯುವ ವೇಳೆ ಫ್ರಾನ್ಸ್ ದೇಶದ ಮೂಲದ ಆಂಥೋನಿ ಎಂಬುವರು ನೀರಜ್ಗೆ ಸೂಕ್ತ ತರಬೇತಿ ನೀಡುತ್ತಿದ್ದರಂತೆ.
ಹರಿಯಾಣದ ಪಾಣಿಪತ್ನ ಖಾಂದ್ರ ಗ್ರಾಮದ 23 ವರ್ಷದ ನೀರಜ್ ಚೋಪ್ರಾ ಜಾವೆಲಿನ್ ಥ್ರೋ ತರಬೇತಿಗಾಗಿ 2017ನೇ ಇಸವಿಯಲ್ಲೇ ಇಲ್ಲಿಗೆ ಬಂದಿದ್ದರಂತೆ. 2017ರಿಂದ 2020ರವರೆಗೆ ಕೂಡ ನೀರಜ್ ಇಲ್ಲಿಯೇ ತರಬೇತಿ ಪಡೆದಿದ್ದಾರೆ. ಅಲ್ಲದೇ, ದೇಶದ ನಾನಾ ಕಡೆಗಳಲ್ಲಿ ನಡೆದ ಜಾವೆಲಿನ್ ಥ್ರೋ ತರಬೇತಿ ಶಿಬಿರಗಳಲ್ಲಿ ಪಾಲ್ಗೊಂಡಿದ್ದರು.