ಬಳ್ಳಾರಿ :ಆಶಾ ಕಾರ್ಯಕರ್ತೆಯರಿಗೆ 12 ಸಾವಿರ ರೂಪಾಯಿ ವೇತನ ನೀಡುವ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ ಎಂದು ಆಶಾಗಳಿಗೆ ಸಚಿವ ಶ್ರೀರಾಮುಲು ಅವರು ಭರವಸೆ ನೀಡಿದರು.
ಕಳೆದ 15 ದಿನಗಳಿಂದ ತಾಲೂಕು, ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆಗಳನ್ನು ನಡೆಸಿ ಜಿಲ್ಲಾಧಿಕಾರಿಗಳು, ತಹಶೀಲ್ದಾರ್, ರಾಜ್ಯದ ಹಲವಾರು ಸಚಿವರಿಗೆ ಮತ್ತು ಶಾಸಕರಿಗೆ ಖುದ್ದಾಗಿ ಆಶಾ ಕಾರ್ಯಕರ್ತೆಯರು ಮನವಿ ಸಲ್ಲಿಸಿದ್ದಾರೆ. ಅಲ್ಲದೇ ಸರ್ಕಾರಕ್ಕೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.
ಶ್ರೀರಾಮುಲು ಮನೆ ಮುಂದೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಇಂದು ಮುಷ್ಕರದ 15ನೇ ದಿನದಂದು ರಾಜ್ಯದ ವಿವಿಧ ಜಿಲ್ಲಾ, ತಾಲೂಕು ಹಾಗೂ ಪಂಚಾಯತ್ ಮಟ್ಟದಲ್ಲಿ ಪ್ರತಿಭಟನೆಗಳನ್ನು ಮಾಡುವುದರ ಮೂಲಕ ಸರ್ಕಾರದ ನಿರ್ಲಕ್ಷ್ಯವನ್ನು ತೀವ್ರವಾಗಿ ಖಂಡಿಸಿ ಆಶಾ ಕಾರ್ಯಕರ್ತೆಯರು ತಮ್ಮ ಅನಿರ್ದಿಷ್ಟ ಮುಷ್ಕರ ಮುಂದುವರೆಸುತ್ತಿದ್ದಾರೆ.
ಇಂದು ಬಳ್ಳಾರಿಯಲ್ಲಿ ಆರೋಗ್ಯ ಸಚಿವರ ಮನೆ ಮುಂದೆ ಪ್ರತಿಭಟನೆ ಮಾಡಿದರು. ಸಚಿವರು ಆಶಾ ಕಾರ್ಯಕರ್ತೆಯರಿಗೆ ₹12 ಸಾವಿರ ವೇತನ ನೀಡುವ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ ಎಂದು ಭರವಸೆ ನೀಡಿದರು.