ಬಳ್ಳಾರಿ: ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆ ವಿರೋಧಿಸಿ ನಗರದಲ್ಲಿಂದು ಬೆಳ್ಳಂಬೆಳಗೆ ಜನರು ಹೋರಾಟಕ್ಕಿಳಿದಿದ್ದಾರೆ. ಬಳ್ಳಾರಿ ಬಂದ್ ಆಚರಣೆ ಸಲುವಾಗಿ ನಾನಾ ಸಂಘಟನೆಗಳ ಮುಖಂಡರು ಟೈಯರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತ್ಯೇಕ ವಿಜಯನಗರ ಜಿಲ್ಲೆಗೆ ವಿರೋಧ: ಬಳ್ಳಾರಿಯಲ್ಲಿ ಪ್ರತಿಭಟನೆ ಕಿಚ್ಚು - ಬಳ್ಳಾರಿ ಪ್ರತಿಭಟನೆ ನ್ಯೂಸ್
ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆ ವಿರೋಧಿಸಿ ಗಣಿಜಿಲ್ಲೆ ಬಳ್ಳಾರಿ ಬಂದ್ ಮಾಡಲಾಗಿದೆ. ನಾನಾ ಸಂಘಟನೆಗಳ ಮುಖಂಡರು ಟೈಯರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿ ಅಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಪ್ರತ್ಯೇಕ ವಿಜಯನಗರ ಜಿಲ್ಲೆಗೆ ವಿರೋಧ: ಬಳ್ಳಾರಿಯಲ್ಲಿ ಪ್ರತಿಭಟನೆ ಕಿಚ್ಚು
ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆ ವಿರೋಧಿಸಿ ಇಂದು ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ಹಮ್ಮಿಕೊಂಡಿರುವ ಬಳ್ಳಾರಿ ಬಂದ್ ಹಿನ್ನೆಲೆಯಲ್ಲಿ, ಗಡಿಗಿ ಚನ್ನಪ್ಪ ವೃತ್ತದಲ್ಲೇ ಅಂದಾಜು 52 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಬಳ್ಳಾರಿ ಬಂದ್, ಕಾನೂನು ಉಲ್ಲಂಘನೆಯಾದಲ್ಲಿ ನಿರ್ದಾಕ್ಷಿಣ್ಯ ಕ್ರಮ: ಎಸ್ಪಿ ಅಡಾವತ್ ಎಚ್ಚರಿಕೆ
ಡಿವೈಎಸ್ಪಿ, ಸಿಪಿಐ, ಪಿಎಸ್ಐ ಸೇರಿದಂತೆ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.
Last Updated : Nov 26, 2020, 8:16 AM IST