ಬಳ್ಳಾರಿ: ಜಿಲ್ಲೆಯ ಹೊಸಪೇಟೆ ನಗರದ ಆರ್‌ಟಿಒ ಕಚೇರಿ ಮುಂಭಾಗದ ನಿರ್ಮಾಣ ಹಂತದಲ್ಲಿರುವ ಸೇತುವೆ ಸೋಮವಾರ ಸಂಜೆ ದಿಢೀರನೆ ಕುಸಿದಿದೆ.
ನಿರ್ಮಾಣ ಹಂತದ ಸೇತುವೆ ದಿಢೀರ್ ಕುಸಿತ: ಕಳಪೆ ಕಾಮಗಾರಿ ಆರೋಪ - Bellary
ಹೊಸಪೇಟೆ ನಗರದ ಆರ್‌ಟಿಒ ಕಚೇರಿ ಮುಂಭಾಗದ ನಿರ್ಮಾಣ ಹಂತದಲ್ಲಿರುವ ಸೇತುವೆ ದಿಢೀರನೆ ಕುಸಿದಿದೆ. ಆದರೆ ಸೇತುವೆ ಕುಸಿತದಿಂದ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ.
ನಿರ್ಮಾಣ ಹಂತದಲ್ಲಿರುವ ಸೇತುವೆ ಕುಸಿತ
ಈ ಸೇತುವೆ ಕುಸಿತದಿಂದ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಸೇತುವೆ ಕಾಮಗಾರಿಯಲ್ಲಿ 10ಕ್ಕಿಂತ ಹೆಚ್ಚು ಕಾರ್ಮಿಕರು ನಿರತರಾಗಿದ್ದರು ಎಂದು ತಿಳಿದು ಬಂದಿದೆ. ಹಳೆಯ ಸೇತುವೆಯನ್ನು ನೆಲಸಮಗೊಳಿಸಿ ಹೊಸ ಸೇತುವೆಯನ್ನು ನಿರ್ಮಾಣ ಮಾಡಲಾಗುತ್ತಿತ್ತು.
ಈ ಕುರಿತು ಪ್ರತಿಕ್ರಿಯಿಸಲು ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಕಿಶೋರ್ ನಿರಾಕರಿಸಿದ್ದಾರೆ. ಸೇತುವೆ ನಿರ್ಮಾಣ ಕಾಮಗಾರಿ ಕಳಪೆಮಟ್ಟದ್ದಾಗಿದೆ ಎಂಬ ಆರೋಪ ಕೇಳಿ ಬಂದಿದೆ.