ಬಳ್ಳಾರಿ:ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಶನಿವಾರ ಒಂದೇ ದಿನ 940 ಜನರಲ್ಲಿ ಸೋಂಕು ದೃಢಪಟ್ಟಿದ್ದು, 25 ಜನ ಮೃತಪಟ್ಟಿದ್ದಾರೆ.
ಈ ಜಿಲ್ಲೆಗಳಲ್ಲಿ ಒಟ್ಟು ಸೋಂಕಿತರ ಸಂಖ್ಯೆ 60,274 ಕ್ಕೆ ಏರಿಕೆಯಾಗಿದ್ದು, ಮೃತರ ಸಂಖ್ಯೆ 877 ಕ್ಕೆ ಏರಿದೆ.
ಇಂದು 629 ಜನರು ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಡಿಸ್ಚಾರ್ಜ್ ಆದವರ ಸಂಖ್ಯೆ 46,641 ತಲುಪಿದೆ. 12,746 ಸಕ್ರಿಯ ಪ್ರಕರಣಗಳಿವೆ.