ಕರ್ನಾಟಕ

karnataka

ETV Bharat / state

ಬಳ್ಳಾರಿ: ವೇತನ ನೀಡುವಂತೆ ಆಗ್ರಹಿಸಿ ಕೊರೊನಾ ವಾರಿಯರ್ಸ್ ಪ್ರತಿಭಟನೆ - Corona Warriors protest

ಗುತ್ತಿಗೆ ಆಧಾರದಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿರುವ ಆರೋಗ್ಯ ಇಲಾಖೆ ಸಿಬ್ಬಂದಿಗೆ ಸರಿಯಾದ ಸಂಬಳ ನೀಡುತ್ತಿಲ್ಲ ಎಂದು ಆರೋಪಿಸಿ, ಕೊರೊನಾ ವಾರಿಯರ್ಸ್‌ ಜಿಲ್ಲಾ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

ಜಿಲ್ಲಾ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ ಕೊರೊನಾ ವಾರಿಯರ್ಸ್‌
ಜಿಲ್ಲಾ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ ಕೊರೊನಾ ವಾರಿಯರ್ಸ್‌

By

Published : Aug 28, 2020, 5:39 PM IST

ಬಳ್ಳಾರಿ:ಕಳೆದ ಆರು ತಿಂಗಳಿನಿಂದ ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಸಿಬ್ಬಂದಿಗೆ ವೇತನ ನೀಡಿಲ್ಲ, ಜೊತೆಗೆ ಒಂದು ದಿನ ರಜೆ ಕೂಡ ಸಿಕ್ಕಿಲ್ಲ ಎಂದು ಆರೋಪಿಸಿ ನೂರಾರು ಕೊರೊನಾ ವಾರಿಯರ್ಸ್‌ ಜಿಲ್ಲಾ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

ಕೊರೊನಾ ವಾರಿಯರ್ಸ್ ಪ್ರತಿಭಟನೆ

ನಗರದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯೊಬ್ಬರು ಮಾತನಾಡಿ, ಗುತ್ತಿಗೆ ಆಧಾರದಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿರುವ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಸರಿಯಾದ ಸಂಬಳ ನೀಡುತ್ತಿಲ್ಲ. ಹೀಗಾಗಿ ಬಹುತೇಕ ಸಿಬ್ಬಂದಿ ಈಗಾಗಲೇ ಕೆಲಸ ಬಿಟ್ಟಿದ್ದಾರೆ. ಕೊರೊನಾ ಮಾಹಾಮಾರಿ ರಾಜ್ಯಕ್ಕೆ ಕಾಲಿಟ್ಟಾಗಿನಿಂದ ರಜೆ ಸಿಕ್ಕಿಲ್ಲ. ಹೀಗಾಗಿ ಕೊರೊನಾ ವಾರಿಯರ್ಸ್ ಹೈರಾಣಾಗಿದ್ದಾರೆ ಎಂದರು.

ಜಿಲ್ಲಾ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ ಕೊರೊನಾ ವಾರಿಯರ್ಸ್‌

ಒಂದು ಕಡೆ ಗುತ್ತಿಗೆ ನೌಕರರಿಗೆ ಸಂಬಳವೂ ಇಲ್ಲ, ಮೇಲಾಗಿ ವಿಶ್ರಾಂತಿ ಸಹ ಇಲ್ಲ. ಹೀಗಾಗಿ ಬಹುತೇಕ ಆರೋಗ್ಯ ಇಲಾಖೆ ಸಿಬ್ಬಂದಿ ಗೈರು ಹಾಜರಾಗುತ್ತಿದ್ದಾರೆ. ಸರ್ಕಾರ ನೇಮಕಾತಿ‌ ಮಾಡಿ ವೈದ್ಯರ ಮತ್ತು ಸಿಬ್ಬಂದಿಗಳ ಒತ್ತಡವನ್ನು ಕಡಿಮೆ ಮಾಡಿ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದರು.

ABOUT THE AUTHOR

...view details