ಬಳ್ಳಾರಿ: ಜಿಲ್ಲೆಯಲ್ಲಿ ಕೋವಿಡ್ ಹರಡದಂತೆ ಸಾರ್ವಜನಿಕರ ಮತ್ತು ಭಕ್ತಾದಿಗಳ ಆರೋಗ್ಯ ಕಾಪಾಡಲು ಹಾಗೂ ಆರೋಗ್ಯದ ಹಿತದೃಷ್ಟಿಯಿಂದ ರಥೋತ್ಸವ, ಜಾತ್ರಾ ಮಹೋತ್ಸವ, ಧಾರ್ಮಿಕ ಕಾರ್ಯಕ್ರಮಗಳ ಆಚರಣೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ.
ಕೋವಿಡ್ ಹಿನ್ನೆಲೆ ಬಳ್ಳಾರಿ ಜಿಲ್ಲೆಯಾದ್ಯಂತ ಜಾತ್ರಾ ಮಹೋತ್ಸವ ನಿಷೇಧಿಸಿ ಡಿಸಿ ಆದೇಶ
ಜಿಲ್ಲೆಯಲ್ಲಿ ಮೇ 27ರವರೆಗೆ ವಿವಿಧ ದೇವಸ್ಥಾನಗಳಲ್ಲಿ ರಥೋತ್ಸವ, ಜಾತ್ರಾ ಮಹೋತ್ಸವ, ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಎರಡು ದಿನಗಳ ಹಿಂದೆ ಹಾಗೂ ಎರಡು ದಿನಗಳ ನಂತರ ದೇವಸ್ಥಾನವನ್ನು ಮುಚ್ಚಲು ಸಂಬಂಧಪಟ್ಟ ದೇವಸ್ಥಾನಗಳ ಉಸ್ತುವಾರಿಗಳಿಗೆ ಸೂಚಿಸಿ ಆದೇಶಿಸಲಾಗಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ಮೇ 31ರವರೆಗೆ ನಿಷೇಧಿಸಿ ಆದೇಶಿಸಲಾಗಿದೆ. ಜಿಲ್ಲೆಯಲ್ಲಿ ಮೇ 27ರವರೆಗೆ ವಿವಿಧ ದೇವಸ್ಥಾನಗಳಲ್ಲಿ ರಥೋತ್ಸವ, ಜಾತ್ರಾ ಮಹೋತ್ಸವ, ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಎರಡು ದಿನಗಳ ಹಿಂದೆ ಹಾಗೂ ಎರಡು ದಿನಗಳ ನಂತರ ದೇವಸ್ಥಾನವನ್ನು ಮುಚ್ಚಲು ಸಂಬಂಧಪಟ್ಟ ದೇವಸ್ಥಾನಗಳ ಉಸ್ತುವಾರಿಗಳಿಗೆ ಸೂಚಿಸಿ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಆದೇಶವನ್ನು ಯಾವುದೇ ವ್ಯಕ್ತಿ/ವ್ಯಕ್ತಿಗಳು ಉಲ್ಲಂಘಿಸಿದ ಪಕ್ಷದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ ಅನುಸಾರ ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.