ಬಳ್ಳಾರಿ: ಹಿರಿಯ ರಂಗಭೂಮಿ ಕಲಾವಿದೆ ನಾಡೋಜ ಪ್ರಶಸ್ತಿ ಪುರಸ್ಕೃತ ಸುಭದ್ರಮ್ಮ ಮನ್ಸೂರ್ (81 ವರ್ಷ) ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ರೇಡಿಯೋ ಪಾರ್ಕ್ ಪ್ರದೇಶದಲ್ಲಿರುವ ಅವರ ನಿವಾಸಕ್ಕೆ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಮತ್ತು ಜಿಲ್ಲಾ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಭೇಟಿ ನೀಡಿ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
ಗಾನ ಕೋಗಿಲೆ ಸುಭದ್ರಮ್ಮ ಮನ್ಸೂರ್ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಜಿಲ್ಲಾಧಿಕಾರಿ - Drama artist
ರಂಗಭೂಮಿಯಲ್ಲಿ ವಿಭಿನ್ನ ಪಾತ್ರಗಳಿಂದ ಹಾಗೂ ಹಾಡುಗಳಿಂದ ಮನೆಮಾತಾಗಿದ್ದ ಕಲಾವಿದೆ ನಾಡೋಜ ಸುಭದ್ರಮ್ಮ ಮನ್ಸೂರ್ ಪಾರ್ಥೀವ ಶರೀರಕ್ಕೆ ಜಿಲ್ಲಾಧಿಕಾರಿ ಅಂತಿಮ ನಮನ ಸಲ್ಲಿಸಿದ್ದಾರೆ.
ಗಾನ ಕೋಗಿಲೆ ಸುಭದ್ರಮ್ಮ ಮನ್ಸೂರ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಜಿಲ್ಲಾಧಿಕಾರಿ
ರಂಗಭೂಮಿ ಕಲಾವಿದೆಯಾಗಿದ್ದ ಇವರು ಗ್ರಾಮೀಣ ಭಾಗದಲ್ಲಿ ಮನೆ ಮಾತಾಗಿದ್ದರು. ಮೃತರು ನಾಡೋಜ, ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವ ವಿದ್ಯಾಯಲಯದ ಗೌರವ ಡಾಕ್ಟರೇಟ್, ರಾಜ್ಯೋತ್ಸವ, ಗುಬ್ಬಿ ವೀರಣ್ಣ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದರು.