ಕರ್ನಾಟಕ

karnataka

By

Published : Nov 5, 2020, 8:53 AM IST

ETV Bharat / state

ಬಳ್ಳಾರಿ ಜಿಲ್ಲೆಯಲ್ಲಿ ಭತ್ತ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗದಿ ಪಡಿಸಿದ ಜಿಲ್ಲಾಡಳಿತ

ಭತ್ತ ಬೆಳೆದ ರೈತರಿಗೆ ಪ್ರತಿ ಗಂಟೆಗೆ ಗರಿಷ್ಠ 2 ಸಾವಿರ ರೂ. ಮೀರದಂತೆ ಭತ್ತ ಕಟಾವು ಯಂತ್ರದ ಬಾಡಿಗೆಯನ್ನು ನಿಗದಿ ಮಾಡಬೇಕು. ತಪ್ಪಿದ್ದಲ್ಲಿ ಭತ್ತ ಕಟಾವು ಯಂತ್ರದ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.

Bellary District administration Rate of hire for paddy harvesting machine
ಬಳ್ಳಾರಿ ಜಿಲ್ಲೆಯಲ್ಲಿ ಭತ್ತ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗದಿ ಪಡಿಸಿದ ಜಿಲ್ಲಾಡಳಿತ

ಬಳ್ಳಾರಿ: 2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 90,781 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿದ್ದು, ಸದ್ಯ ಭತ್ತದ ಬೆಳೆಯನ್ನು ಹಲವು ಕಡೆ ಕಟಾವು ಮಾಡಲು ಪ್ರಾರಂಭವಾಗಿದ್ದು, ಒಂದು ವಾರದಲ್ಲಿ ಹೆಚ್ಚಿನ ಪ್ರಮಾಣ ದಲ್ಲಿ ಕಟಾವು ಪ್ರಾರಂಭವಾಗಲಿದೆ. ಇದಕ್ಕಾಗಿ ಜಿಲ್ಲಾಡಳಿತವು ಭತ್ತ ಕಟಾವು ಯಂತ್ರಕ್ಕೆ ಬಾಡಿಗೆ ದರವನ್ನು ನಿಗದಿಪಡಿಸಿದೆ.

ಜಿಲ್ಲೆಯಲ್ಲಿ ಶೇ.95ರಷ್ಟು ರೈತರು ಭತ್ತದ ಬೆಳೆಯನ್ನು ಭತ್ತ ಕಟಾವು ಯಂತ್ರಗಳ ಮೂಲಕ ಕಟಾವು ಮಾಡುತ್ತಿದ್ದು, ರೈತರು ತಮ್ಮ ಸಮೀಪದ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಲಭ್ಯವಿರುವ ಭತ್ತ ಕಟಾವು ಯಂತ್ರಗಳ ಪ್ರಯೋಜನವನ್ನು ಪಡೆಯಬಹುದು.

ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಪ್ರತಿ ಗಂಟೆಗೆ ರೂ. 2,500 ರಿಂದ ರೂ. 3,000 ಗಳ ವರೆಗೆ ಬಾಡಿಗೆ ಹಣ ನಿಗದಿಪಡಿಸುತ್ತಿರುವುದು ಗಮನಕ್ಕೆ ಬಂದಿದ್ದು, ಇದರಿಂದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ. ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ಭತ್ತ ಬೆಳೆದ ರೈತರಿಗೆ ಪ್ರತಿ ಗಂಟೆಗೆ ಗರಿಷ್ಠ 2 ಸಾವಿರ ರೂ. ಮೀರದಂತೆ ಭತ್ತ ಕಟಾವು ಯಂತ್ರದ ಬಾಡಿಗೆಯನ್ನು ನಿಗದಿ ಮಾಡಬೇಕು. ತಪ್ಪಿದ್ದಲ್ಲಿ ಭತ್ತ ಕಟಾವು ಯಂತ್ರದ ಮಾಲೀಕರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಎಚ್ಚರಿಕೆ ನೀಡಿದ್ದಾರೆ.

For All Latest Updates

TAGGED:

ABOUT THE AUTHOR

...view details