ಬಳ್ಳಾರಿ: ಮಹಾನಗರ ಪಾಲಿಕೆ ಚುನಾವಣೆ ಪ್ರಚಾರ, ಜನರ ಓಡಾಟ ಸೇರಿದಂತೆ ವಿವಿಧ ಕಾರಣಗಳಿಂದ ಬಳ್ಳಾರಿ ನಗರದಲ್ಲಿ ಹೆಚ್ಚಿನ ಕೊರೊನಾ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಕಳವಳ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್, ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕೋವಿಡ್ ಸ್ಥಿತಿಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸದ್ಯ 4522 ಸಕ್ರಿಯ ಪ್ರಕರಣಗಳಿವೆ. ಅವುಗಳಲ್ಲಿ ಬಳ್ಳಾರಿಯಲ್ಲಿ 2178 ಪ್ರಕರಣಗಳು ಇವೆ. ಕೊರೊನಾ 1ನೇ ಅಲೆಯನ್ನು ನಿಭಾಯಿಸಿದಂತೆ 2ನೇ ಅಲೆಯಲ್ಲೂ ಕಾರ್ಯನಿರ್ವಹಿಸಿ. ಪ್ರತೀ ತಾಲೂಕುಗಳಲ್ಲಿ ಆಕ್ಸಿಜನ್ ವ್ಯವಸ್ಥೆಯ ಬಗ್ಗೆ ವರದಿ ತರಿಸಿಕೊಳ್ಳಿ. ಆ ಪ್ರಕಾರ ಕ್ರಮ ವಹಿಸಿ. ಸೋಂಕಿತರ ಚಿಕಿತ್ಸೆಗೆ ಆಕ್ಸಿಜನ್ ಕೊರತೆಯಾಗದಂತೆ ಕ್ರಮ ವಹಿಸಿ ಎಂದರು.