ಕರ್ನಾಟಕ

karnataka

ETV Bharat / state

ಬಳ್ಳಾರಿಯಲ್ಲಿ ಸಚಿವ ಆನಂದ್‌ ಸಿಂಗ್ ಕೋವಿಡ್ ಪ್ರಗತಿ ಪರಿಶೀಲನಾ ಸಭೆ - ಅಧಿಕಾರಿಗಳೊಂದಿಗೆ ಆನಂದ್​ಸಿಂಗ್​ ಕೋವಿಡ್​ ನಿಯಂತ್ರಣ ಕುರಿತು ಚರ್ಚೆ

ಉಸ್ತುವಾರಿ ಸಚಿವ ಬಿ.ಎಸ್.ಆನಂದ್‌ ಸಿಂಗ್, ಜಿಲ್ಲೆಯಲ್ಲಿ ಕೋವಿಡ್​ ಪ್ರಕರಣ ಹೆಚ್ಚಳ ಹಿನ್ನೆಲೆ ಇಂದು ಜಿಲ್ಲೆಯ ಅಧಿಕಾರಿಗಳೊಂದಿಗೆ ಕೋವಿಡ್​ ಪರಿಶೀಲನಾ ಸಭೆ ನಡೆಸಿದ್ರು.

kovid meeting
ಪ್ರಗತಿ ಪರಿಶೀಲನಾ ಸಭೆ

By

Published : Oct 17, 2020, 3:33 PM IST

ಬಳ್ಳಾರಿ:ಬಳ್ಳಾರಿಯ ವಿಮ್ಸ್ ನಿರ್ದೇಶಕರ ಕಚೇರಿಯಲ್ಲಿಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಆನಂದ್ ಸಿಂಗ್ ನೇತೃತ್ವದಲ್ಲಿ ಕೋವಿಡ್ ಪ್ರಗತಿ ಪರಿಶೀಲನಾ ಸಭೆ ನಡೆಯಿತು‌.

ಪ್ರಗತಿ ಪರಿಶೀಲನಾ ಸಭೆ

ಈ ಸಭೆಯಲ್ಲಿ ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರ ರೆಡ್ಡಿ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಎಡಿಸಿ ಮಂಜುನಾಥ, ವಿಮ್ಸ್ ನಿರ್ದೇಶಕ ಡಾ.ದೇವಾನಂದ, ಅಸಿಸ್ಟೆಂಟ್ ಡೈರೆಕ್ಟರ್ ಡಾ.ಎ.ಚೆನ್ನಪ್ಪ, ವಿಮ್ಸ್ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ.ಮರಿರಾಜ ಸೇರಿದಂತೆ ಇನ್ನಿತರೆ ಅಧಿಕಾರ ವರ್ಗದವರು ಭಾಗಿಯಾಗಿದ್ದರು. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳದ ಹಿನ್ನೆಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣದ ಸಲುವಾಗಿ ಏನೇನು ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಕುರಿತು ಚರ್ಚಿಸಲಾಯಿತು.
ಮಾಧ್ಯಮದವರಿಗೆ ನಿರ್ಬಂಧ:

ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣ ಸಲುವಾಗಿ ಕರೆಯಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಧ್ಯಮದವರ ಪ್ರವೇಶಕ್ಕೆ ನಿರ್ಬಂಧ ಹೇರಲಾಯಿತು.‌

ABOUT THE AUTHOR

...view details