ಬಳ್ಳಾರಿ: 73ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ "ಮನೆಗೊಂದು ಮರ ಊರಿಗೊಂದು ವನ" ಎಂಬ ಧ್ಯೇಯ ವಾಕ್ಯದಡಿ ಅರಣ್ಯ ಇಲಾಖೆಯಿಂದ ಉಚಿತವಾಗಿ 3,000 ಸಾವಿರ ಸಸಿಗಳ ವಿತರಣೆ ಮಾಡಲಾಯಿತು.
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅರಣ್ಯ ಇಲಾಖೆಯಿಂದ ಸಸಿ ವಿತರಣೆ - Bellary City Stadium
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬಳ್ಳಾರಿಯಲ್ಲಿ ಅರಣ್ಯ ಇಲಾಖೆಯಿಂದ ಉಚಿತವಾಗಿ ಸಸಿ ವಿತರಣೆ ನಡೆಯಿತು. ಇಲಾಖೆ ಸಿಬ್ಬಂದಿ ವಿವಿಧ ಜಾತಿಯ ಸುಮಾರು 3000 ಸಾವಿರ ಸಸಿಗಳನ್ನು ಸಾರ್ವಜನಿಕರಿಗೆ ವಿತರಣೆ ಮಾಡಿದರು.
![ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅರಣ್ಯ ಇಲಾಖೆಯಿಂದ ಸಸಿ ವಿತರಣೆ](https://etvbharatimages.akamaized.net/etvbharat/prod-images/768-512-4144639-thumbnail-3x2-hrs.jpg)
ಬಳ್ಳಾರಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅರಣ್ಯ ಇಲಾಖೆಯಿಂದ ಉಚಿತ ಸಸಿ ವಿತರಣೆ.
ನಗರದ ಜಿಲ್ಲಾ ಕ್ರೀಡಾಂಗಣ ಮುಂಭಾಗದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಸಿಸಿಗಳ ವಿತರಣೆ ಮಾಡಿದರು. ಬೇವು, ನಿಂಬೆ, ಕರಿಬೇವು, ನೀಲಗಿರಿ ಗಿಡ, ಹೂವಿನ ಸಸಿ ಸೇರಿದಂತೆ ವಿವಿಧ ಜಾತಿಯ ಸಸಿಗಳನ್ನು ಸಾರ್ವಜನಿಕರಿಗೆ ವಿತರಣೆ ಮಾಡಲಾಯಿತು.
ಅರಣ್ಯ ಇಲಾಖೆಯಿಂದ ಉಚಿತ ಸಸಿ ವಿತರಣೆ
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಸಿಗಳನ್ನು ಪಡೆದುಕೊಂಡು ಹೋದರು.