ಕರ್ನಾಟಕ

karnataka

ETV Bharat / state

ಬಳ್ಳಾರಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಗಮನ ಸೆಳೆದ ಲಂಬಾಣಿ ಕುಣಿತ.. - Bellary News

ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಸೀತಾರಾಮ ತಾಂಡಾದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅದ್ದೂರಿಯಾಗಿ ಆಚರಿಸಲಾಯಿತು. ತಾಂಡಾದ ನಿವಾಸಿಗಳು ಧ್ವಜಾರೋಹಣ ನೇರವೇರಿಸಿ ಸಿಹಿ ಹಂಚಿ ಸಂಬ್ರಮಿಸಿದರು. ಬಳಿಕ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಲಂಬಾಣಿ ನೃತ್ಯ ನೆರೆದಿದ್ದವರ ಗಮನ ಸೆಳೆಯಿತು.

ಗಮನ ಸೆಳೆದ ಲಂಬಾಣಿ ಕುಣಿತ

By

Published : Aug 16, 2019, 6:54 PM IST

ಬಳ್ಳಾರಿ: ಜಿಲ್ಲೆಯ ಹೊಸಪೇಟೆ ತಾಲೂಕಿನ ಸೀತಾರಾಮ ತಾಂಡಾದಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ತಾಂಡಾದ ಸರ್ಕಾರಿ ಶಾಲೆ ಆವರಣದಲ್ಲಿ ಮುಖ್ಯ ಶಿಕ್ಷಕರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಿಹಿ ಹಂಚಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ಗಮನ ಸೆಳೆದ ಲಂಬಾಣಿ ಕುಣಿತ..

ಗಮನ ಸೆಳೆದ ಲಂಬಾಣಿ ನೃತ್ಯ:

ಕಾರ್ಯಕ್ರಮದಲ್ಲಿ ದೇಶ ಭಕ್ತಿಗೀತೆಗಳ ಧ್ವನಿ ಸುರುಳಿಗೆ ಲಂಬಾಣಿ ಸಮುದಾಯದ ಮಹಿಳೆಯರು ಸಖತ್ ಡ್ಯಾನ್ಸ್ ಮಾಡುವ ಮೂಲಕ ನೆರೆದಿದ್ದ ಪ್ರೇಕ್ಷಕರ ಗಮನ ಸೆಳೆದರು. ಲಂಬಾಣಿ ಸಮುದಾಯದ ಸಾಂಪ್ರದಾಯಿಕ ಉಡುಗೆ- ತೊಡುಗೆ ಧರಿಸಿ ಮಹಿಳೆಯರು ನೃತ್ಯ ಪ್ರದರ್ಶನ ಮಾಡಿದರು.

ABOUT THE AUTHOR

...view details