ಬಳ್ಳಾರಿ:ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲಿನಲ್ಲಿರುವ ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮತ್ತೋರ್ವನಲ್ಲಿ ಕೊರೊನಾ ಪತ್ತೆಯಾಗಿದ್ದು, ಇದೀಗ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ.
ಜಿಂದಾಲ್ ಉಕ್ಕು ಕಾರ್ಖಾನೆಯ ಮತ್ತೋರ್ವ ಉದ್ಯೋಗಿಗೆ ಕೊರೊನಾ!
ಜಿಂದಾಲ್ ಉಕ್ಕು ಕಾಖಾರ್ನೆಯಲ್ಲಿ ಕೆಲಸ ಮಾಡುತ್ತಿದ್ದ ಮತ್ತೋರ್ವ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆಯ ಸಿಎಂಬಿ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದ 42 ವರ್ಷದ ಉದ್ಯೋಗಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದಾಗಿ ಸಹೋದ್ಯೋಗಿಗಳಲ್ಲಿ ಆತಂಕ ಮೂಡಿದೆ.
ಕೊರೊನಾ ಪಾಸಿಟಿವ್ ಪತ್ತೆಯಾದ ವ್ಯಕ್ತಿ ಯಾವುದೇ ಸಾಂಸ್ಥಿಕ ಅಥವಾ ಹೋಂ ಕ್ವಾರಂಟೈನ್ನಲ್ಲಿರಲಿಲ್ಲ. ಸೋಂಕಿತನ ಟ್ರಾವೆಲ್ ಹಿಸ್ಟರಿಯನ್ನ ಆರೋಗ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಲು ಮುಂದಾಗಿದ್ದಾರೆ. ಸದ್ಯ ಸೋಂಕಿತ ವ್ಯಕ್ತಿಯನ್ನ ಜಿಲ್ಲಾ ಕೋವಿಡ್-19 ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಜಿಂದಾಲ್ ಕಂಪನಿಯಲ್ಲಿ ಇದುವರೆಗೆ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಕಂಪನಿಯ ಉಳಿದ ಉದ್ಯೋಗಿಗಳಲ್ಲಿ ಆತಂಕ ಹೆಚ್ಚಾಗಿದೆ.