ಕರ್ನಾಟಕ

karnataka

ETV Bharat / state

ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ: ವಾರಾಂತ್ಯ ರಾಜಕೀಯ ಪ್ರಚಾರಕ್ಕೆ ಬ್ರೇಕ್

ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು ಕಟ್ಟುನಿಟ್ಟಾಗಿ ಪಾಲಿಸುವ ಉದ್ದೇಶದಿಂದ ವಾರಾಂತ್ಯದ ಸಮಯದಲ್ಲಿ ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ ಪ್ರಚಾರ ಮಾಡದಂತೆ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಆದೇಶಿಸಿದ್ದಾರೆ.

ಬಳ್ಳಾರಿ
ಬಳ್ಳಾರಿ

By

Published : Apr 23, 2021, 4:16 PM IST

ಬಳ್ಳಾರಿ: ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಕಟ್ಟುನಿಟ್ಟಾಗಿ ಪಾಲಿಸುವ ಉದ್ದೇಶದಿಂದ ವಾರಾಂತ್ಯದ ಸಮಯದಲ್ಲಿ ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ ಪ್ರಚಾರ ಮಾಡದಂತೆ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಆದೇಶಿಸಿದ್ದಾರೆ.

ಈ ಸಂಬಂಧ ಯಾವುದೇ ಅಭ್ಯರ್ಥಿ, ಮುಖಂಡರು, ಕಾರ್ಯಕರ್ತರು, ರಾಜಕೀಯ ಪ್ರತಿನಿಧಿಗಳು ನಿಯಮ ಉಲ್ಲಂಘಿಸಿದ್ದು ಕಂಡು ಬಂದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ಕಲಂ 51ರಿಂದ 60ರವರೆಗೆ ಅನ್ವಯವಾಗುವ ಐಪಿಸಿ ಸೆಕ್ಷನ್ 188 ರಂತೆ ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020 ರ ಕಲಂ (4),(5) ಮತ್ತು (10) ರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಕರ್ಫ್ಯೂ ಜಾರಿಗೊಳಿಸಿರುವುದರಿಂದ ಚುನಾವಣಾ ಆಯೋಗದ ಆದೇಶದಂತೆ ಗರಿಷ್ಠ 5 ಜನ ಬೆಂಬಲಿಗರೊಂದಿಗೆ ಫೇಸ್ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಮನೆ ಮನೆಗೆ ತೆರಳಿ ಚುನಾವಣೆ ಪ್ರಚಾರ ನಡೆಸಲು ಅವಕಾಶ ನೀಡಲಾಗಿತ್ತು. ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ವೀಕೆಂಡ್ ಕರ್ಫ್ಯೂ ಕಟ್ಟುನಿಟ್ಟಾಗಿ ಪಾಲಿಸಬೇಕಾಗಿರುವುದರಿಂದ ಕೇವಲ ತುರ್ತು ಸೇವಾ ವಾಹನಗಳನ್ನು ಹೊರತು ಪಡಿಸಿ, ಅನಗತ್ಯ ವಾಹನಗಳು ಓಡಾಡುವುದನ್ನು ಮತ್ತು ಸಾರ್ವಜನಿಕರ ಅನಗತ್ಯ ಓಡಾಟವನ್ನು ನಿಷೇಧಿಸಲಾಗಿದೆ.

ಅಂಗಡಿ, ಬಾರ್, ಹೋಟೆಲ್ ಇತರ ಎಲ್ಲಾ ತರಹದ ಅಂಗಡಿಗಳನ್ನು ಮುಚ್ಚುವುದು ಕಡ್ಡಾಯವಾಗಿರುತ್ತದೆ. ಕಟ್ಟುನಿಟ್ಟಿನ ಕರ್ಫ್ಯೂ ಜಾರಿಗೊಳಿಸಲು ಮಹಾನಗರ ಪಾಲಿಕೆಯ ಚುನಾವಣಾ ಪ್ರಚಾರ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

ABOUT THE AUTHOR

...view details