ಕರ್ನಾಟಕ

karnataka

ETV Bharat / state

ಇಂದು ಬಳ್ಳಾರಿ ಮಹಾನಗರ ಪಾಲಿಕೆ ಫಲಿತಾಂಶ; ಸಂಭ್ರಮಾಚರಣೆಗಿಲ್ಲ ಅವಕಾಶ - ಬಳ್ಳಾರಿ ಮಹಾನಗರ ಪಾಲಿಕೆ,

ಇಂದು ಬಳ್ಳಾರಿ ಮಹಾನಗರ ಪಾಲಿಕೆ ಫಲಿತಾಂಶ ಹೊರಬೀಳಲಿದ್ದು ನಗರದಲ್ಲಿ ಮೆರವಣಿಗೆ, ಸಂಭ್ರಮಾಚರಣೆ, ರಸ್ತೆ ಸಂಚಾರಕ್ಕೆ ಎಸ್​ಪಿ ನಿರ್ಬಂಧ ಹೇರಿದ್ದಾರೆ.

Bellary Municipality election counting, Bellary Municipality election counting today, Bellary Municipality election, Bellary Municipality election news, ಬಳ್ಳಾರಿ ಮಹಾನಗರ ಪಾಲಿಕೆ ಫಲಿತಾಂಶ, ಇಂದು ಬಳ್ಳಾರಿ ಮಹಾನಗರ ಪಾಲಿಕೆ ಫಲಿತಾಂಶ, ಬಳ್ಳಾರಿ ಮಹಾನಗರ ಪಾಲಿಕೆ, ಬಳ್ಳಾರಿ ಮಹಾನಗರ ಪಾಲಿಕೆ ಸುದ್ದಿ,
ಸಂಭ್ರಮಾಚರಣೆಗೆ ಬ್ರೇಕ್ ಹಾಕಿದ ಎಸ್​ಪಿ

By

Published : Apr 30, 2021, 7:20 AM IST

ಬಳ್ಳಾರಿ:ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ ಕಾರ್ಯವು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದ್ದು, ಪೊಲೀಸ್‌ ವರಿಷ್ಠಾಧಿಕಾರಿ ಸೈದುಲ ಅಡಾವತ್​ ಕಟ್ಟುನಿಟ್ಟಿನ ಆದೇಶ ಜಾರಿಗೊಳಿಸಿದ್ದಾರೆ.

ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸಾರ್ವಜನಿಕರ ಹಿತದೃಷ್ಟಿಯಿಂದ ಸಿ.ಆರ್.ಪಿ.ಸಿ. ಸೆಕ್ಷನ್‌ 144 ಅಡಿಯಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ವ್ಯಾಪ್ತಿಯಾದ್ಯಂತ ನಿಷೇಧಾಜ್ಞೆ ಹೊರಡಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಮತ್ತು ವ್ಯಾಪ್ತಿಯ 03 ಕಿ.ಮೀ. ಪರಿಧಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಸಂಭ್ರಮಾಚರಣೆಗೆ ಕಡಿವಾಣ

ಬಳ್ಳಾರಿ ನಗರದಾದ್ಯಂತ ಯಾವುದೇ ಕಾರಣಕ್ಕೂ ನಾಲ್ಕು ಜನರಿಗಿಂತ ಹೆಚ್ಚು ಗುಂಪು ಸೇರಬಾರದು. ಸಭೆ, ಸಮಾರಂಭ ಮಾಡುವಂತಿಲ್ಲ. ಮತ ಎಣಿಕೆ ಕೇಂದ್ರದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿ ಅಥವಾ ಅವರ ಪ್ರತಿನಿಧಿಯಾಗಲಿ ಕೇವಲ ಒಬ್ಬರಿಗೆ ಮಾತ್ರ ಅಧಿಕೃತ ಪಾಸ್‍ನೊಂದಿಗೆ ಪ್ರವೇಶಕ್ಕೆ ಅವಕಾಶವಿದೆ. ಚುನಾವಣೆಯಲ್ಲಿ ಗೆದ್ದವರು ಯಾವುದೇ ರೀತಿಯ ಸಂಭ್ರಮಾಚರಣೆ ಮತ್ತು ಮೆರವಣಿಗೆ ಮಾಡುವಂತಿಲ್ಲ ಎಂದು ಎಸ್​ಪಿ ಹೇಳಿದ್ದಾರೆ.

ರಸ್ತೆ ಸಂಚಾರಕ್ಕೆ ನಿರ್ಬಂಧ

ಬೆಳಗ್ಗೆ 6 ರಿಂದ ಸಂಜೆ 5 ರವರೆಗೆ ಈ ಕೆಳಕಂಡಂತೆ ರಸ್ತೆ ಸಂಚಾರ ನಿರ್ಬಂಧಿಸಲಾಗಿದೆ.

- ಎಸ್.ಪಿ. ವೃತ್ತದಿಂದ ಅಂಬೇಡ್ಕರ್ ವೃತ್ತದ ರಸ್ತೆ, ಅಂಬೇಡ್ಕರ್ ವೃತ್ತದಿಂದ ಕೌಲ್‍ಬಜಾರ್ ಫ್ಲೈ ಓವರ್ ಹಾಗೂ ಹೊಸಪೇಟೆ ರಸ್ತೆಯ ಓಪಿಡಿ ವೃತ್ತದವರೆಗಿನ ರಸ್ತೆಯಲ್ಲಿ ಜನ/ವಾಹನ ಸಂಚಾರವಿರಲ್ಲ.

- ಹೊಸಪೇಟೆ ಹಾಗೂ ಸಿರುಗುಪ್ಪ ರಸ್ತೆಯಿಂದ ಅನಂತಪುರ, ಕರ್ನೂಲು, ಬೆಂಗಳೂರು ಕಡೆ ಹೋಗುವ ವಾಹನಗಳು ಓಪಿಡಿ ವೃತ್ತದಿಂದ ಎಸ್.ಪಿ. ವೃತ್ತ, ದುರ್ಗಮ್ಮ ದೇಗುಲ, ರಾಯಲ್ ವೃತ್ತ ಹಾಗೂ ಇಂದಿರಾ ವೃತ್ತದ ಮೂಲಕ ಸಂಚರಿಸಲು ಅನುವು ಮಾಡಿಕೊಡಲಾಗಿದೆ.

- ಅನಂತಪುರ ಮತ್ತು ಮೋಕಾ ರಸ್ತೆಯಿಂದ ಹೊಸಪೇಟೆ ಕಡೆ ಹೋಗುವ ವಾಹನಗಳು ಇಂದಿರಾ ವೃತ್ತ, ಮೋತಿ ವೃತ್ತ, ರಂಗಮಂದಿರ ಮುಂಭಾಗದಿಂದ ಸಂಚರಿಸಬಹುದು.

ABOUT THE AUTHOR

...view details