ಬಳ್ಳಾರಿ:ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪವನ್ ಕುಮಾರ್ ಮಲಪಾಟಿ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ಈ ವೇಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಥಮ ಬಾರಿ ಜಿಲ್ಲಾಧಿಕಾರಿಯಾಗಿ ಆಯ್ಕೆಯಾಗಿದ್ದೇನೆ. ಜನರ ಸಮಸ್ಯೆಗಳು ಏನೇ ಇದ್ರು ತಿಳಿಸಿ ಅದನ್ನು ಬಗೆಹರಿಸುವ ಕೆಲಸ ಮಾಡುತ್ತೇನೆ ಎಂದರು.
ಈ ಹಿಂದೆ ವಿಧಾನಸೌಧದಲ್ಲಿ ಆರ್ಥಿಕ ಇಲಾಖೆಯಲ್ಲಿ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು. ಅಷ್ಟೇ ಅಲ್ಲದೆ, ಶಿರಸಿ ಮತ್ತು ಹೊಸಪೇಟೆ ಸಹಾಯಕ ಆಯುಕ್ತರಾಗಿ, ಬೀದರ್ನಲ್ಲಿ ಸಿಇಒ ಆಗಿ ಕೆಲಸ ನಿರ್ವಹಿಸಿದ್ದರು.
ಈ ಸಮಯದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅವರು ನೂತನ ಜಿಲ್ಲಾಧಿಕಾರಿ ಪವನ್ ಕುಮಾರ್ ಮಲಪಾಟಿ ಅವರಿಗೆ ಕಚೇರಿಯ ಆವರಣದಲ್ಲಿ ಇರುವ ಕಟ್ಟಡಗಳನ್ನು ತೋರಿಸಿ ಮತ್ತು ಅಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು, ಸಿಬ್ಬಂದಿಗಳ ಪರಿಚಯ ಮಾಡಿದರು.