ಕರ್ನಾಟಕ

karnataka

ETV Bharat / state

ಬಳ್ಳಾರಿ ವಿಭಜನೆ: ಪರ 10513, ವಿರುದ್ಧ 4739 ಆಕ್ಷೇಪಣೆ.. ಸರ್ಕಾರಕ್ಕೆ ವರದಿ ಸಲ್ಲಿಕೆ - Submission of objection to division of Bellary district

ಬಳ್ಳಾರಿ ಜಿಲ್ಲೆಯನ್ನು ವಿರೋಧಿಸಿ 4739 ಆಕ್ಷೇಪಣೆಗಳು ಸ್ವೀಕೃತವಾಗಿದ್ದವು ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ತಿಳಿಸಿದ್ದಾರೆ.

Bellary Partition: Report of objections to the Government with the Shara
ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ

By

Published : Feb 4, 2021, 10:34 PM IST

ಬಳ್ಳಾರಿ: ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ರಚನೆ ಅಧಿಸೂಚನೆಗೆ ಸಂಬಂಧಿಸಿದಂತೆ ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಷರಾದೊಂದಿಗೆ ಪ್ರಾದೇಶಿಕ ಆಯುಕ್ತರ ಮುಖಾಂತರ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಜಿಲ್ಲೆಯನ್ನು ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆ ರಚನೆಗೆ ಅಧಿಸೂಚನೆ ಹೊರಡಿಸಲಾಗಿತ್ತು. ಜನವರಿ 13ರವರೆಗೆ ಆಕ್ಷೇಪಣೆಗೆ ಕಾಲಾವಕಾಶ ನೀಡಲಾಗಿತ್ತು. ಜಿಲ್ಲೆ ವಿಭಜಿಸಿ ಹೊಸ ಜಿಲ್ಲೆ ರಚನೆಗೆ ಸಂಬಂಧಿಸಿದಂತೆ ಪರ ಮತ್ತು ವಿರೋಧ ಆಕ್ಷೇಪಣೆಗಳು ಸಲ್ಲಿಕೆಯಾಗಿದ್ದವು. ಎಲ್ಲ ಆಕ್ಷೇಪಣೆಗಳನ್ನು ಬಳ್ಳಾರಿ ಜಿಲ್ಲಾಡಳಿತ ಪರಿಶೀಲಿಸಿ ಸೂಕ್ತ ಷರಾದೊಂದಿಗೆ ಪ್ರಾದೇಶಿಕ ಆಯುಕ್ತರ ಮುಖಾಂತರ ಸರಕಾರಕ್ಕೆ ವರದಿ ಸಲ್ಲಿಸಿದೆ ಎಂದು ತಿಳಿಸಿದ್ದಾರೆ.

ಓದಿ:ತೆರಿಗೆ ಪರಿಷ್ಕರಿಸುವ ನಗರ ಪಾಲಿಕೆ-ಪುರಸಭೆ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ಜಿಲ್ಲೆಯನ್ನು ವಿರೋಧಿಸಿ 4739 ಆಕ್ಷೇಪಣೆಗಳು ಸ್ವೀಕೃತವಾಗಿದ್ದವು. ಹಾಗೆಯೇ ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆಯೊಂದಿಗೆ ಆಡಳಿತಾತ್ಮಕ ದೃಷ್ಟಿಯಿಂದ ವಿಜಯನಗರ ಜಿಲ್ಲೆಯಾಗಬೇಕೆಂದು ಸರ್ಕಾರದ ಅಧಿಸೂಚನೆಯನ್ನು ಬೆಂಬಲಿಸಿ ಸುಮಾರು 10513 ಬೆಂಬಲಿತ ಪತ್ರಗಳು ಸ್ವೀಕೃತವಾಗಿದ್ದು, ಕರ್ನಾಟಕ ಭೂಕಂದಾಯ ಅಧಿನಿಯಮ 1964ರ ಕಲಂ 6 ರಡಿ ಸ್ವೀಕೃತವಾದ ಎಲ್ಲ ಸಲಹೆ ಮತ್ತು ಆಕ್ಷೇಪಣೆಗಳನ್ನು ಕರ್ನಾಟಕ ಭೂಕಂದಾಯ ನಿಯಮ 1966ರ ನಿಯಮ 5ರ ಅಡಿ ಪರಿಶೀಲಿಸಿ ಆಕ್ಷೇಪಣೆಗಳಿಗೆ ಜಿಲ್ಲಾಧಿಕಾರಿಗಳು ಒಂದೊಂದಾಗಿ ಪರಿಶೀಲಿಸಿ ಸಮಗ್ರವಾಗಿ ಷರಾ ನಮೂದಿಸಿ ಪತ್ರದನ್ವಯ ಸಲ್ಲಿಸಲಾದ ಪ್ರಸ್ತಾವನೆಯನ್ನು ಹಾಗೂ ಅದರೊಂದಿಗೆ ಸಲ್ಲಿಸಿದ ಅಡಕಗಳೊಂದಿಗೆ ಕಲಬುರಗಿ ಪ್ರಾದೇಶಿಕ ಆಯುಕ್ತರು ಸರ್ಕಾರಕ್ಕೆ ಬುಧವಾರ ವರದಿ ಸಲ್ಲಿಸಿದ್ದಾರೆ ಎಂದರು.

ABOUT THE AUTHOR

...view details