ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ಶಾನವಾಸಪುರ ಕ್ರಾಸ್ ಬಳಿ ಇಂದು ಮಧ್ಯಾಹ್ನ ಟಿಪ್ಪರ್ ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬಳ್ಳಾರಿ: ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ : ಇಬ್ಬರು ಸ್ಥಳದಲ್ಲೇ ಸಾವು - Bellary Accident news
ಟಿಪ್ಪರ್ ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕುರಿತು ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಿಪ್ಪರ್ ಲಾರಿ-ಬುಲೆಟ್ ಬೈಕ್ ಮುಖಾಮುಖಿ ಡಿಕ್ಕಿ
ಸಿರುಗುಪ್ಪ ತಾಲೂಕಿನ ಗೋಸಬಾಳು ಗ್ರಾಮದ ನಿವಾಸಿ ವೆಂಕಟೇಶ (25), ರಾಮಕೃಷ್ಣ (20) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಸಿರುಗುಪ್ಪ ತಾಲೂಕಿನ ಗೋಸಬಾಳ ಗ್ರಾಮದಿಂದ ಸಿರಿಗೇರಿ ಕ್ರಾಸ್ ಗೆ ಡೀಸೆಲ್ ತರಲಿಕ್ಕೆ ಬುಲೆಟ್ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಎದುರುಗಡೆ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಈ ವೇಳೆ ಟಿಪ್ಪರ್ ಲಾರಿ ನೆಲಕ್ಕುರುಳಿ ಬಿದ್ದಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಅಸುನೀಗಿದ್ದಾರೆ.ಈ ಕುರಿತು ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.